ವಾಷಿಂಗ್ಟನ್: ಅಮೆರಿಕದಲ್ಲಿ ಭಾರತೀಯ ಮೂಲದ ಶ್ರೀನಿವಾಸ್ ಹತ್ಯೆಯನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಂಡಿಸಿದ್ದಾರೆ.
ಮೊದಲ ಬಾರಿಗೆ ಸಂಸತ್ ಉದ್ದೇಶಿಸಿ ಮಾತನಾಡಿದ ಟ್ರಂಪ್, ಕಾನ್ಸಾಸ್‍ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಶ್ರೀನಿವಾಸ್ ಹತ್ಯೆಯನ್ನು ಖಂಡಿಸಿದ್ರು.
Advertisement
ಅಮೆರಿಕದ ಯಹೂದಿ ಕೇಂದ್ರಗಳನ್ನು ಉದ್ದೇಶಿಸಿ ಮಾಡಲಾಗುತ್ತಿರುವ ಬೆದರಿಕೆ ಹಾಗೂ ಕಾನ್ಸಾಸ್‍ನಲ್ಲಿ ಭಾರತೀಯನ ಹತ್ಯೆಯಾಗಿರಬಹುದು, ಅಮೆರಿಕ ಯಾವುದೇ ರೀತಿಯ ದ್ವೇಷ ಮತ್ತು ದುಷ್ಕೃತ್ಯವನ್ನು ಖಂಡಿಸುತ್ತದೆ ಅಂತ ಟ್ರಂಪ್ ಹೇಳಿದ್ರು.
Advertisement
ಫೆಬ್ರವರಿ 24ರಂದು ಹೈದರಾಬಾದ್ ಮೂಲದ 32 ವರ್ಷದ ಎಂಜಿನಿಯರ್ ಶ್ರೀನಿವಾಸ್ ಕೂಚಿಬೊಟ್ಲ ಅಮೆರಿಕದಲ್ಲಿ ಗುಂಡಿನ ದಾಳಿಗೆ ಬಲಿಯಾಗಿದ್ದರು. ಶ್ರೀನಿವಾಸ್ ತನ್ನ ಗೆಳೆಯನ ಜೊತೆ ಕಾನ್ಸಾಸ್‍ನ ಬಾರಿನಲ್ಲಿದ್ದ ವೇಳೆ 51 ವರ್ಷದ ಆಡಂ ಪುರಿಂಟನ್ ಎಂಬ ದುಷ್ಕರ್ಮಿ ಶ್ರೀನಿವಾಸ್ ಮತ್ತು ಅವರ ಗೆಳೆಯನನ್ನು ಮಿಡಲ್ ಈಸ್ಟರ್ನ್(ಮಧ್ಯಪ್ರಾಚ್ಯ ದೇಶದವರು) ಎಂದು ಕರೆದು ನನ್ನ ದೇಶವನ್ನು ಬಿಟ್ಟು ತೊಲಗಿ ಎಂದು ಕೂಗುತ್ತಾ ಗುಂಡಿನ ದಾಳಿ ನಡೆಸಿದ್ದ. ದಾಳಿಯಲ್ಲಿ ಶ್ರೀನಿವಾಸ್ ಸಾವನ್ನಪ್ಪಿದ್ದು, ಅಲೋಕ್ ಮದಾಸಿನಿ ಎಂಬ ಮತ್ತೊಬ್ಬ ಭಾರತೀಯ ಗಾಯಗೊಂಡಿದ್ದರು.
Advertisement
ಘಟನೆಯ ನಂತರ ಪರಾರಿಯಾಗಿದ್ದ ದಾಳಿಕೋರ ಆಡಂ ಪುರಿಂಟನ್, ಮಿಸ್ಸೌರಿಯ ಸ್ಥಳೀಯ ಬಾರ್ವೊಂದರಲ್ಲಿ ನಾನು ಇಬ್ಬರು ಮಧ್ಯಪ್ರಾಚ್ಯ ವ್ಯಕ್ತಿಗಳನ್ನು ಕೊಂದಿದ್ದೇನೆ ಎಂದು ಹೇಳಿದ್ದ. ಇದನ್ನು ಕೇಳಿ ಅಲ್ಲಿನ ಸಿಬ್ಬಂದಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ರು. ಘಟನೆ ನಡೆದ 5 ಗಂಟೆಗಳ ಒಳಗೆ ಆಡಂನನ್ನು ಅಮೆರಿಕ ಪೊಲೀಸರು ಬಂಧಿಸಿದ್ರು.