ಬೆಂಗಳೂರು: ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಹಾಗೂ ಬೆಂಗಳೂರಿನ ರಾಜಭವನದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಆಯೋಜಿಸಿರುವ ಬುಡಕಟ್ಟು ಸಮುದಾಯದ ಜನರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಸೋಮವಾರ ಮಧ್ಯಾಹ್ನ ಬೆಂಗಳೂರಿಗೆ (Bengaluru) ಆಗಮಿಸಿದ್ದಾರೆ.
ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ (Thawarchand Gehlot) ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ರಾಷ್ಟ್ರಪತಿಯವರನ್ನು ಹೆಚ್‍ಎಎಲ್‍ನಲ್ಲಿ ಬರಮಾಡಿಕೊಂಡರು. ಬಳಿಕ ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗವಹಿಸಲು ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಪ್ರಯಾಣಿಸಿದರು. ಇದನ್ನೂ ಓದಿ: ಕುಮಾರಸ್ವಾಮಿ ಇಷ್ಟು ಬೇಗ ಮೈ ಪರಚಿಕೊಳ್ಳುವ ಅಗತ್ಯವಿಲ್ಲ : ಗುಂಡೂರಾವ್
Advertisement
Advertisement
ಈ ಸಮಯದಲ್ಲಿ ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಬೆಂಗಳೂರು ಪ್ರಾದೇಶಿಕ ಆಯುಕ್ತರಾದ ಆಮ್ಲನ್ ಆದಿತ್ಯ ಬಿಸ್ವಾಸ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ. ಮಣಿವಣ್ಣನ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್, ಬೆಂಗಳೂರು ಜಿಲ್ಲಾಧಿಕಾರಿ ಕೆ.ಎ ದಯಾನಂದ್, ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ವಿಪಕ್ಷ ನಾಯಕನಿಲ್ಲದೆ ಕಲಾಪ ನಡೆದಿದ್ದು ದುರ್ದೈವ: ಹೆಚ್.ಕೆ ಪಾಟೀಲ್
Advertisement
Web Stories