ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ( Droupadi Murmu) ಅವರು ಬಿಜೆಪಿ ಹಿರಿಯ ನಾಯಕ, ಮಾಜಿ ಗೃಹ ಸಚಿವ ಎಲ್.ಕೆ.ಅಡ್ವಾಣಿ (LK Advani) ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನ (Bharat Ratna) ಪ್ರಶಸ್ತಿಯನ್ನು ಅವರ ನಿವಾಸದಲ್ಲೇ ಪ್ರದಾನ ಮಾಡಿದರು.
ಈ ವೇಳೆ ಪ್ರಧಾನಿ ನರೇಂದ್ರ ಮೋದಿ (PM Narendra Modi), ಉಪರಾಷ್ಟ್ರಪತಿ ಜಗದೀಪ್ ಧನಕರ್, ಮಾಜಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಉಪಸ್ಥಿತರಿದ್ದರು.
Advertisement
ಶನಿವಾರ ರಾಷ್ಟ್ರಪತಿ ಭವನದಲ್ಲಿ ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಪಿ.ವಿ. ನರಸಿಂಹ ರಾವ್, ಕೃಷಿ ವಿಜ್ಞಾನಿ ಎಂ.ಎಸ್. ಸ್ವಾಮಿನಾಥನ್ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿತ್ತು. ಅನಾರೋಗ್ಯದ ಕಾರಣ ಶನಿವಾರ ನಡೆದ ಸಮಾರಂಭದಲ್ಲಿ ಭಾರತ ರತ್ನ ಪ್ರಶಸ್ತಿ ಸ್ವೀಕರಿಸಲು ಅಡ್ವಾಣಿ ಆಗಮಿಸಿರಲಿಲ್ಲ. ಇದನ್ನೂ ಓದಿ: ಕಚ್ಚತೀವು ಪ್ರದೇಶವನ್ನು ಕಾಂಗ್ರೆಸ್ ಶ್ರೀಲಂಕಾಗೆ ನೀಡಿದೆ – ತಮಿಳುನಾಡಿನಲ್ಲಿ ಬಿರುಗಾಳಿ ಎಬ್ಬಿಸಿದ RTI ಉತ್ತರ
Advertisement
Advertisement
ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ನೀಡಲಾಗುವುದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಈ ವರ್ಷದ ಫೆಬ್ರವರಿಯಲ್ಲಿ ಪ್ರಕಟಿಸಿದ್ದರು.
Advertisement
ಎಲ್ ಕೆ ಅಡ್ವಾಣಿ ಜಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂದು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ತಿಳಿಸಿದ್ದರು. ಇದನ್ನೂ ಓದಿ: ಹುಟ್ಟುಹಬ್ಬಕ್ಕೆ ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ಕೇಕ್ ತಿಂದು 10ರ ಬಾಲಕಿ ಸಾವು
#WATCH | President Droupadi Murmu confers Bharat Ratna upon veteran BJP leader LK Advani at the latter's residence in Delhi.
Prime Minister Narendra Modi, Vice President Jagdeep Dhankhar, former Vice President M. Venkaiah Naidu are also present on this occasion. pic.twitter.com/eYSPoTNSPL
— ANI (@ANI) March 31, 2024
ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರು, ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಬಹಳಷ್ಟಿದೆ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶ ಸೇವೆ ಮಾಡಿದ್ದಾರೆ. ಅವರು ನಮ್ಮ ಗೃಹ ಮಂತ್ರಿ ಮತ್ತು ವಾರ್ತಾ ಮತ್ತು ಪ್ರಸಾರ ಸಚಿವರಾಗಿಯೂ ಗುರುತಿಸಿಕೊಂಡರು. ಅವರ ಸಂಸದೀಯ ಮಧ್ಯಸ್ಥಿಕೆಗಳು ಯಾವಾಗಲೂ ಆದರ್ಶಪ್ರಾಯವಾಗಿವೆ, ಶ್ರೀಮಂತ ಒಳನೋಟಗಳಿಂದ ತುಂಬಿವೆ. ಸಾರ್ವಜನಿಕ ಜೀವನದಲ್ಲಿ ಅಡ್ವಾಣಿ ದಶಕಗಳ ಸುದೀರ್ಘ ಸೇವೆಯು ಪಾರದರ್ಶಕತೆ ಮತ್ತು ಸಮಗ್ರತೆಗೆ ಅಚಲವಾದ ಬದ್ಧತೆಯಿಂದ ಗುರುತಿಸಲ್ಪಟ್ಟಿದೆ. ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಪುನರುತ್ಥಾನದ ಕಡೆಗೆ ಅಪ್ರತಿಮ ಪ್ರಯತ್ನಗಳನ್ನು ಅಡ್ವಾಣಿ ಮಾಡಿದ್ದಾರೆ. ಅವರಿಗೆ ಭಾರತರತ್ನ ಪ್ರಶಸ್ತಿಯನ್ನು ಕೊಡುವುದು ನನ್ನ ಪಾಲಿನ ಅತ್ಯಂತ ಭಾವನಾತ್ಮಕ ಕ್ಷಣ ಎಂದು ಬರೆದಿದ್ದರು.