ನವದೆಹಲಿ: ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಆಗಿರುವ ಜಾರ್ಖಂಡ್‍ನ ಮಾಜಿ ಗವರ್ನರ್ ದ್ರೌಪದಿ ಮುರ್ಮು ಅವರು ಇಂದು ನಾಮಪತ್ರ ಸಲ್ಲಿಸಿದರು.
#WATCH | Prime Minister Narendra Modi arrives at the Parliament ahead of the filing of nomination by NDA’s Presidential election candidate Droupadi Murmu pic.twitter.com/3T3ZBBNV29
— ANI (@ANI) June 24, 2022
Advertisement
ರಾಷ್ಟ್ರಪತಿ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜಕೀಯ ಚಟುವಟಿಕೆಗಳೂ ಗರಿಗೆದರಿವೆ. ಈ ನಡುವೆ ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿ ಮತ್ತು ಜಾಖರ್ಂಡ್‍ನ ಮಾಜಿ ರಾಜ್ಯಪಾಲ ದ್ರೌಪದಿ ಮುರ್ಮು ಇಂದು 12 ಗಂಟೆಗೆ ಸಂಸತ್ ಭವನದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಅನೇಕ ರಾಜ್ಯಗಳ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು. ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿ ಮಾಡಿದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು – ನಾಳೆ ನಾಮಪತ್ರ ಸಲ್ಲಿಕೆ
Advertisement
#WATCH | NDA’s candidate for Presidential election Droupadi Murmu arrives at Parliament for filing her nomination pic.twitter.com/t7gwk0fnwL
— ANI (@ANI) June 24, 2022
Advertisement
ಮತ್ತೊಂದೆಡೆ, ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಜೂನ್ 27 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗುತ್ತಿದೆ. ಯಶವಂತ್ ಸಿನ್ಹಾ ಅವರು ನಾಮಪತ್ರ ಸಲ್ಲಿಸುವ ವೇಳೆ ರಾಜ್ಯದ ಪ್ರಮುಖ ನಾಯಕರು ಹಾಜರಿರಲು ಕಾಂಗ್ರೆಸ್ ಸೂಚಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ದೆಹಲಿಗೆ ತೆರಳುವ ಸಾಧ್ಯತೆಗಳಿವೆ.
Advertisement
Delhi | NDA’s candidate for the Presidential election Droupadi Murmu arrives at Parliament for filing her nomination pic.twitter.com/PaFsUUJPK5
— ANI (@ANI) June 24, 2022
ದ್ರೌಪದಿ ಮುರ್ಮು ಅವರು ಒಡಿಸ್ಸಾದ ಮಾಯರ್ಭಾಂಜ್ ಜಿಲ್ಲೆಯವರಾಗಿದ್ದು, ಬುಡಕಟ್ಟು ಜನಾಂಗ ಮೂಲದ ಮಹಿಳೆ. ಈ ಹಿಂದೆ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು. 2015-21ರ ಅವಧಿಯಲ್ಲಿ ಜಾರ್ಖಂಡ್‍ನ ರಾಜ್ಯಪಾಲರಾಗಿದ್ದರು. ಇದೀಗ 16ನೇ ರಾಷ್ಟ್ರಪತಿ ಚುನಾವಣೆಯ ಎನ್‍ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಯ BJP ಅಭ್ಯರ್ಥಿ ದ್ರೌಪದಿ ಮುರ್ಮುಗೆ ʼZ’ ಭದ್ರತೆ
ವಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಮತ್ತು ದ್ರೌಪದಿ ಮುರ್ಮು ನಡುವೆ ರಾಷ್ಟ್ರಪತಿ ಹುದ್ದೆಗಾಗಿ ಪೈಪೋಟಿ ನಡೆಯಲಿದೆ. ಈಗಾಗಲೇ ಬಹುತೇಕ ದ್ರೌಪದಿ ಮುರ್ಮುಗೆ ಅರ್ಧಕ್ಕಿಂತಲೂ ಹೆಚ್ಚಿನ ಮತ ಇದ್ದು ಬಿಜೆಡಿ ಈಗಾಗಲೇ ಬೆಂಬಲ ಘೋಷಿಸಿದೆ. ಹೀಗಾಗಿ ದ್ರೌಪದಿ ಮುರ್ಮು ರಾಷ್ಟ್ರಪತಿಯಾಗಿ ಆಯ್ಕೆಯಾಗುವುದು ಖಚಿತವಾಗಿದೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ.