ನವದೆಹಲಿ/ಬೆಂಗಳೂರು: ಭಾರತದ 15ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಚುನಾವಣೆ ನಡೆಯಲಿದೆ. 4,800 ಚುನಾಯಿತ ಸಂಸದರು ಮತ್ತು ಶಾಸಕರು ಮತದಾನ ಮಾಡಲಿದ್ದಾರೆ.
ಸಂಸತ್ ಭವನ ಮತ್ತು ರಾಜ್ಯ ವಿಧಾನಸೌಧಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಜುಲೈ 21ಕ್ಕೆ ಫಲಿತಾಂಶ ಪ್ರಕಟವಾಗಲಿದ್ದು, ಜುಲೈ 25ಕ್ಕೆ ಹೊಸ ರಾಷ್ಟ್ರಪತಿ ಪ್ರಮಾಣ ಸ್ವೀಕರಿಸಲಿದ್ದಾರೆ.
Advertisement
ಎನ್‍ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು, ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಕಣದಲ್ಲಿದ್ದಾರೆ. ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಶೇ.60ರಷ್ಟು ಮತಗಳೊಂದಿಗೆ ಗೆಲ್ಲುವುದು ಬಹುತೇಕ ಖಚಿತವಾಗಿದೆ. ಇದನ್ನೂ ಓದಿ: ಬುಡಕಟ್ಟು ವಿರೋಧಿ ಎಂದು ಬ್ಯಾನರ್ಜಿ ವಿರುದ್ಧ 50,000 ಪೋಸ್ಟರ್ ಹಾಕಿದ ಬಿಜೆಪಿ
Advertisement
Advertisement
ಎನ್‍ಡಿಎ ಜೊತೆಗೆ ಬುಡಕಟ್ಟು ಮಹಿಳೆ ಎನ್ನುವ ಕಾರಣಕ್ಕೆ ಪ್ರಾದೇಶಿಕ ಪಕ್ಷಗಳಾದ ಬಿಜೆಡಿ, ವೈಎಸ್‍ಆರ್‌ಪಿಸಿ, ಬಿಎಸ್‍ಪಿ, ಎಐಎಡಿಎಂಕೆ, ಟಿಡಿಪಿ, ಜೆಡಿಎಸ್, ಶಿರೋಮಣಿ ಅಕಾಲಿದಳ, ಶಿವಸೇನೆ ಬೆಂಬಲ ನೀಡಿವೆ. ಒಟ್ಟು 10,86,431 ಮತಗಳ ಪೈಕಿ ವಿವಿಧ ಪ್ರಾದೇಶಿಕ ಪಕ್ಷಗಳ ಬೆಂಬಲದ ನಂತರ ಎನ್‍ಡಿಎ ಅಭ್ಯರ್ಥಿ ಪರ 6.67 ಲಕ್ಷಕ್ಕೂ ಹೆಚ್ಚು ಮತಗಳಿವೆ.
Advertisement
ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ರಾಜ್ಯದ 224 ಜನ ಶಾಸಕರು ಹಾಗೂ 28 ಜನ ಲೋಕಸಭಾ ಸದಸ್ಯರು ಮತದಾನ ಮಾಡಲಿದ್ದಾರೆ. ಬಿಜೆಪಿ ಶಾಸಕರು ಒಟ್ಟಾಗಿ ನೇರವಾಗಿ ವಿಧಾನಸೌಧಕ್ಕೆ ಬಂದು ಮತದಾನ ಮಾಡಲಿದ್ದಾರೆ.
ಕಾಂಗ್ರೆಸ್ ಶಾಸಕರಿಗೆ ನಿಗದಿತ ಸಮಯದೊಳಗೆ ಬಂದು ಮತದಾನ ಮಾಡುವಂತೆ ಸೂಚನೆ ನೀಡಲಾಗಿದೆ. ಈ ಮಧ್ಯೆ, ಆಗಸ್ಟ್ 6ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಅಭ್ಯರ್ಥಿಯಾಗಿ ಕರ್ನಾಟಕ ಮೂಲದ ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವಾರನ್ನು ಆಯ್ಕೆ ಮಾಡಲಾಗಿದೆ.