ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ (Congress President Election) ದಿನದಿಂದ ದಿನಕ್ಕೆ ರಂಗೇರುತ್ತಿದೆ. ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದ್ದು, ಕಡೆಯ ಹಂತದಲ್ಲಿ ಗಾಂಧೀ ಕುಟುಂಬದ ಆಪ್ತರಾಗಿರುವ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕಣಕ್ಕಿಳಿಯುವ ಸಾಧ್ಯತೆ ಕಂಡುಬಂದಿದೆ.
Advertisement
ಈಗಾಗಲೇ ಶಶಿ ತರೂರ್ (Shashi Tharoo) ನಾಮಪತ್ರಸಲ್ಲಿಸಿದ್ದಾರೆ. ಇಂದು 3 ಗಂಟೆವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಮಲ್ಲಿಕಾರ್ಜುನ ಖರ್ಗೆ ಕಡೆಯ ಹಂತದಲ್ಲಿ ರೇಸ್‍ನಲ್ಲಿ ಕಾನಿಸಿಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಇತ್ತ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹಿಂದೆ ಸರಿದ ಬೆನ್ನಲ್ಲೇ ಇನ್ನೋರ್ವ ಗಾಂಧೀ ಕುಟುಂಬದ ಆಪ್ತರಾಗಿರುವ ಖರ್ಗೆ ಹೆಸರು ಮುಂಚೂಣಿಯಲ್ಲಿದೆ. ಇದನ್ನೂ ಓದಿ: ಪ್ರಯಾಣಿಕರಿಂದ ಸುಲಿಗೆ ಮಾಡುವ ಖಾಸಗಿ ವಾಹನಗಳಿಗೆ ಬ್ರೇಕ್ ಹಾಕಲು ಮುಂದಾದ ಸಾರಿಗೆ ಇಲಾಖೆ
Advertisement
Advertisement
ಈಗಾಗಲೇ ಖರ್ಗೆ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಿದೆ. ಕಾಂಗ್ರೆಸ್‍ನಲ್ಲಿರುವ ಒಬ್ಬರಿಗೆ ಒಂದು ಹುದ್ದೆ ಎಂಬ ನಿಯಮಾನುಸಾರ ಖರ್ಗೆ ಈ ನಿರ್ಧಾರಕ್ಕೆ ಮುಂದಾಗಿದ್ದಾರೆ ಎಂದು ಆಪ್ತ ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ರಾಜ್ಯದ 9 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ- ಕಡತಗಳ ಪರಿಶೀಲನೆ
Advertisement
ಮಲ್ಲಿಕಾರ್ಜುನ ಖರ್ಗೆ, ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರಂತಹ ವಿರೋಧ ಪಕ್ಷಗಳ ನಾಯಕರ ಜೊತೆ ಉತ್ತಮ ಸಂಪರ್ಕ ಹಾಗೂ ಸಂಬಂಧ ಇರಿಸಿಕೊಂಡಿದ್ದಾರೆ. ಖರ್ಗೆ ಅವರ ಬದ್ಧತೆ ಮತ್ತು ಕಾರ್ಯವೈಖರಿಯನ್ನು ಪಕ್ಷ ಮೆಚ್ಚಿಕೊಂಡಿದೆ. ಅಲ್ಲದೇ ಗಾಂಧೀ ಕುಟುಂಬದ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವುದರಿಂದಾಗಿ ಖರ್ಗೆಗೆ ಇದು ಪ್ಲಸ್ ಪಾಯಿಂಟ್ ಆಗಿದೆ. ಜೊತೆಗೆ ಖರ್ಗೆ ಅವರು ಹಿಂದಿಯಲ್ಲಿ ಉತ್ತಮ ಹಿಡಿತ ಹೊಂದಿದ್ದಾರೆ. ಹೀಗಾಗಿ ಹಿಂದಿ ಮಾತನಾಡುವ ಪ್ರದೇಶಗಳಲ್ಲಿ ಕೂಡ ಅವರು ಅಭಿಮಾನಿ ವರ್ಗವನ್ನು ಹೊಂದಿದ್ದಾರೆ. ಹಾಗಾಗಿ ಖರ್ಗೆ ಕಾಂಗ್ರೆಸ್ ಅಧ್ಯಕ್ಷ ಚುಕ್ಕಾಣಿ ಹಿಡಿದರೂ ಅಚ್ಚರಿ ಇಲ್ಲ.
ಖರ್ಗೆ ಜೊತೆ ಜಿ23 (G23) ಗುಂಪಿನಲ್ಲಿ ಕಾಣಿಸಿಕೊಂಡಿದ್ದ ಆ್ಯಂಟೋನಿ, ಕಮಲ್‍ನಾಥ್, ಅಂಬಿಕಾ ಸೋನಿ, ಪವನ್ ಕುಮಾರ್ ಬನ್ಸಲ್ ಹೆಸರು ಕೇಳಿ ಬರುತ್ತಿದೆ. ಜಾರ್ಖಂಡ್‍ನ ಮಾಜಿ ಶಾಸಕ ಕೆ.ಎನ್ ತ್ರಿಪಾಠಿ ಮತ್ತು ದಿಗ್ವಿಜಯ್ ಸಿಂಗ್ ಕೂಡ ನಾಮಪತ್ರ ಸಲ್ಲಿಸಲು ಮುಂದಾಗಿದ್ದಾರೆ. ನಾಮಪತ್ರ ಹಿಂಪಡೆಯಲು ಅ.8 ಕೊನೆಯ ದಿನವಾಗಿದ್ದು, ಅ.17 ರಂದು ಎಲ್ಲ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ 4ರವರೆಗೆ ಚುನಾವಣೆ ನಡೆಯಲಿದೆ. ಅ.19ಕ್ಕೆ ಫಲಿತಾಂಶ ಪ್ರಕಟವಾಗಲಿದೆ.