– ಸಂಸತ್‌ನಲ್ಲಿ ನಿರ್ಣಯ ಮಂಡನೆಗೆ ಸರ್ಕಾರ ಸಜ್ಜು
– ವಿಪಕ್ಷಗಳ ಒಕ್ಕೂಟಕ್ಕೆ ಠಕ್ಕರ್ ಕೊಡಲು ಕೇಂದ್ರ ಪ್ಲ್ಯಾನ್?
ನವದೆಹಲಿ: ಬಿಜೆಪಿ (BJP) ಕೇಂದ್ರ ಸರ್ಕಾರವು ದೇಶದ ಹೆಸರನ್ನು `ಇಂಡಿಯಾ’ ಬದಲಿಗೆ `ರಿಪಬ್ಲಿಕ್ ಆಫ್ ಭಾರತ್’ (Republic Of Bharat) ಎಂದು ಮರುನಾಮಕರಣ ಮಾಡುವ ಹೊಸ ನಿರ್ಣಯವನ್ನು ಸಂಸತ್ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
Advertisement
`ಇಂಡಿಯಾ’ (India) ಬದಲು ದೇಶದ ಹೆಸರನ್ನು `ರಿಪಬ್ಲಿಕ್ ಆಫ್ ಭಾರತ್’ ಎಂದು ಕರೆಯಬೇಕು ಎಂಬುದಾಗಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಲಹೆ ನೀಡಿದ್ದ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ನಿರ್ಣಯಕ್ಕೆ ಮುಂದಾಗಿದೆ ಎಂದು ಹೇಳಲಾಗಿದೆ. ಜಿ20 ಶೃಂಗಸಭೆಗೆ ರಾಷ್ಟ್ರಪತಿಗಳು ಗಣ್ಯರಿಗೆ ನೀಡಿದ ಆಹ್ವಾನ ಪತ್ರಿಕೆಯಲ್ಲಿ `ಪ್ರೆಸಿಡೆಂಟ್ ಆಫ್ ಇಂಡಿಯಾ’ ಬದಲಿಗೆ `ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಉಲ್ಲೇಖಿಸಿದ ನಂತರ ಈ ಚರ್ಚೆ ಹುಟ್ಟಿಕೊಂಡಿದೆ.
Advertisement
REPUBLIC OF BHARAT – happy and proud that our civilisation is marching ahead boldly towards AMRIT KAAL
— Himanta Biswa Sarma (@himantabiswa) September 5, 2023
Advertisement
ಈ ನಡುವೆ ರಿಪಬ್ಲಿಕ್ ಆಫ್ ಭಾರತ್ ಎಂಬ ಪದವನ್ನು ಉಲ್ಲೇಖಿಸಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. “ರಿಪಬ್ಲಿಕ್ ಆಫ್ ಭಾರತ್ (ಭಾರತ್ ಗಣರಾಜ್ಯ) – ನಮ್ಮ ನಾಗರಿಕತೆಯು ಅಮೃತ ಕಾಲದ ಕಡೆಗೆ ಧೈರ್ಯದಿಂದ ಮುನ್ನಡೆಯುತ್ತಿರುವುದಕ್ಕೆ ಸಂತೋಷ ಮತ್ತು ಹೆಮ್ಮೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: 9 ವರ್ಷದಲ್ಲಿ ಒಂದು ದಿನವೂ ರಜೆ ಇಲ್ಲದೇ ಪ್ರಧಾನಿ ಮೋದಿ ಕೆಲಸ – 3,000 ಕಾರ್ಯಕ್ರಮಗಳಲ್ಲಿ ಭಾಗಿ
Advertisement
Article 52 – Constitution of India.
There shall be a President of INDIA
Can’t get more explicit than this – Can it ??????? pic.twitter.com/9OoPcLBktW
— Manish Tewari (@ManishTewari) September 5, 2023
ಜಿ20 ಸಭೆಗೆ ಬರುವ ಗಣ್ಯರಿಗೆ ಸೆಪ್ಟೆಂಬರ್ 9 ರಂದು ರಾಷ್ಟ್ರಪತಿ ಭವನದಲ್ಲಿ ಬೃಹತ್ ಔತಣಕೂಟ ಏರ್ಪಡಿಸಲಾಗಿದೆ. ಗಣ್ಯರಿಗೆ ನೀಡಿದ ಆಹ್ವಾನ ಪತ್ರಿಕೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರು `ಪ್ರೆಸಿಡೆಂಟ್ ಆಫ್ ಭಾರತ್’ ಎಂದು ತಮ್ಮ ಹುದ್ದೆಯನ್ನು ಉಲ್ಲೇಖಿಸಿದ್ದಾರೆ. ಈವರೆಗೆ ಪ್ರೆಸಿಡೆಂಟ್ ಆಫ್ ಇಂಡಿಯಾ ಎಂದು ರಾಷ್ಟ್ರಪತಿಗಳು ತಮ್ಮ ಹುದ್ದೆಯನ್ನು ಉಲ್ಲೇಖಿಸುತ್ತಿದ್ದರು.
ಬಿಜೆಪಿ ಅನೇಕ ನಾಯಕರು ಇದಕ್ಕೆ ಬೆಂಬಲ ಸೂಚಿಸಿದ್ದರೆ, ದೇಶದ ಹೆಸರನ್ನೇ ಬದಲಾಯಿಸಲು ಸರ್ಕಾರ ಮುಂದಾಗಿದೆ ಎಂದು ಐಎನ್‌ಡಿಐಎ ಒಕ್ಕೂಟ ತೀವ್ರವಾಗಿ ಖಂಡಿಸಿದೆ. ಇದನ್ನೂ ಓದಿ: ಜಿ20 ಶೃಂಗಸಭೆಗೆ ಅಮೆರಿಕ ಅಧ್ಯಕ್ಷರ ಪ್ರವಾಸ – ಬೈಡನ್ ಪ್ರವಾಸಕ್ಕೂ ಮುನ್ನ ಜಿಲ್ ಬೈಡನ್‍ಗೆ ಕೊರೊನಾ ಸೋಂಕು
ವಿಪಕ್ಷಗಳಿಗೆ ಠಕ್ಕರ್?
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್‌ಡಿಎ ಮೈತ್ರಿಕೂಟವನ್ನು ಮಣಿಸಲು ವಿಪಕ್ಷಗಳು ‘ಐಎನ್‌ಡಿಐಎ’ ಮೈತ್ರಿಕೂಟ ಮಾಡಿಕೊಂಡಿವೆ. ಹೆಸರು ‘ಇಂಡಿಯಾ’ ಎಂದು ಇರುವುದರಿಂದ ಮೈತ್ರಿಕೂಟಕ್ಕೆ ಠಕ್ಕರ್ ಕೊಡಲು, ದೇಶದ ಹೆಸರು ಮರುನಾಮಕರಣಕ್ಕೆ ಕೇಂದ್ರ ಮುಂದಾಗಿದೆ ಎಂಬ ಚರ್ಚೆಯೂ ನಡೆಯುತ್ತಿದೆ.
Web Stories