ನವದೆಹಲಿ: ಕರಾವಳಿ ಕ್ರೀಡೆ ಕಂಬಳಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ರಾಜ್ಯ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಹಿಹಾಕಿದ್ದಾರೆ.
Advertisement
ಸಹಿ ಬಿದ್ದ ಕಾರಣ ಕಂಬಳವನ್ನು ಯಥಾ ಪ್ರಕಾರ ಮುಂದು ವರಿಸುವ ರಾಜ್ಯ ಸರಕಾರದ “ಕಂಬಳ ತಿದ್ದುಪಡಿ ಮಸೂದೆ’ಗೆ ಎದುರಾಗಿದ್ದ ಎಲ್ಲ ಕಾನೂನು ಅಡೆತಡೆಗಳು ದೂರವಾಗಿದೆ.
Advertisement
ಪ್ರಾಣಿ ಹಿಂಸೆ ತಡೆ (ಕರ್ನಾಟಕ ತಿದ್ದುಪಡಿ)ಮಸೂದೆ-2017 ಉಭಯ ಸದನಗಳಲ್ಲಿ ಒಪ್ಪಿಗೆ ಪಡೆದು ಫೆ.7ರಂದು ರಾಜ್ಯಪಾಲರ ಒಪ್ಪಿಗೆ ಕಳುಹಿಸಲಾಗಿತ್ತು. ರಾಜ್ಯಪಾಲರು ಅದನ್ನು ಫೆ.23ರಂದು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದರು. ಪ್ರಾಣಿ ಹಿಂಸೆ ವಿಚಾರವಾಗಿ ಮಸೂದೆಯಲ್ಲಿ ಬಳಸಿದ ಪದವೊಂದು ಸೂಕ್ತವಲ್ಲದ ಕಾರಣ ಕಾನೂನು ಸಚಿವಾಲಯ ವಿಧೇಯಕಕ್ಕೆ ತನ್ನ ಒಪ್ಪಿಗೆ ನೀಡಿರಲಿಲ್ಲ.
Advertisement
ಈ ಮಸೂದೆಯನ್ನು ಪುನರ್ ಪರಿಶೀಲಿಸುವಂತೆ ಕೋರಿ ಕೇಂದ್ರ ಸರ್ಕಾರ ಮತ್ತೆ ರಾಜ್ಯ ಸರ್ಕಾರಕ್ಕೆ ಕಳುಹಿಸಿತ್ತು. ರಾಜ್ಯ ಸರ್ಕಾರ ಕೆಲ ಮಾರ್ಪಾಡುಗಳನ್ನು ಮಾಡಿ ಕಳುಹಿಸಿದ್ದ ಮಸೂದೆಗೆ ಗೃಹಸಚಿವ ರಾಜನಾಥ್ ಸಿಂಗ್ ಜೂನ್ 29ರಂದು ಸಹಿ ಹಾಕಿದ್ದರು.
Advertisement
https://youtu.be/Klbxs_37mBI