ಚಾಮರಾಜನಗರ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಿಲ್ಲಾ ಪ್ರವಾಸ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಅಂಗರಕ್ಷಕರು ಜಿಲ್ಲೆಗೆ ಆಗಮಿಸಿದ್ದು, ಕಟ್ಟೆಚ್ಚರ ವಹಿಸಿದ್ದಾರೆ. ಅಲ್ಲದೇ ಪೊಲೀಸರಿಗೂ ಕೆಲ ಸೂಚನೆಗಳನ್ನು ಕೊಟ್ಟಿದ್ದಾರೆ.
ರಾಷ್ಟ್ರಪತಿಗಳ ಅಂಗ ರಕ್ಷಕರು ಇಂದು ವಾಯುಸೇನೆ ಹೆಲಿಕಾಪ್ಟರ್ ಮೂಲಕ ಚಾಮರಾಜನಗರ ಮತ್ತು ಬಿಳಿಗಿರಿರಂಗನ ಬೆಟ್ಟಕ್ಕೆ ಭೇಟಿ ನೀಡಿದ್ದು, ಮೂರು-ನಾಲ್ಕು ಬಾರಿ ಹೆಲಿಕಾಪ್ಟರ್ ಮೂಲಕ ಹಾರಾಟ ನಡೆಸಿ ಸಕಲ ತಯಾರಿ ನಡೆಸಿದ್ದಾರೆ. ಇದನ್ನೂ ಓದಿ: RSS ನ 4 ಸಾವಿರ ಐಎಎಸ್, ಐಪಿಎಸ್ ಅಧಿಕಾರಿಗಳಿದ್ದಾರೆ- ಬಿಜೆಪಿ ವಿರುದ್ಧ ಎಚ್‍ಡಿಕೆ ವಾಗ್ದಾಳಿ
ಈಗಾಗಲೇ ಚಾಮರಾಜನಗರ ಮೆಡಿಕಲ್ ಕಾಲೇಜು ಮತ್ತು ಬಿಳಿಗಿರಿರಂಗನ ಬೆಟ್ಟ ಸಮೀಪ ನಿರ್ಮಾಣವಾಗಿರುವ ಹೆಲಿಪ್ಯಾಡ್ ಗಳನ್ನು ಪರಿಶೀಲಿಸಿದ್ದು, ರಸ್ತೆ ಮಾರ್ಗದಲ್ಲೂ ಸೈನಿಕರು ಟ್ರಯಲ್ ನಡೆಸಿದ್ದಾರೆ. ಬಿಳಿಗಿರಿರಂಗನ ಬೆಟ್ಟ ದೇವಾಲಯಕ್ಕೆ ರಾಷ್ಟ್ರಪತಿಗಳ ಖಾಸಗಿ ಭೇಟಿಯಾಗಿರುವುದರಿಂದ ಪತ್ರಕರ್ತರ ಪ್ರವೇಶಕ್ಕೆ ಅಂದು ನಿರ್ಬಂಧ ಹೇರಲಾಗಿದೆ.
ಸಾರ್ವಜನಿಕರಿಗೆ ನಿರ್ಬಂಧ
ಚಾಮರಾಜನಗರ ಜಿಲ್ಲೆಗೆ ರಾಷ್ಟ್ರಪತಿ ಭೇಟಿ ಹಿನ್ನಲೆ ಅ.6 ಮತ್ತು 7 ರಂದು ಬಿಳಿಗಿರಿರಂಗನಬೆಟ್ಟಕ್ಕೆ ಸಾರ್ವಜನಿಕರು, ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಅ.7ರಂದು ವಡ್ಡಗೆರೆ ಹೆಲಿಪ್ಯಾಡ್, ಬಿಳಿಗಿರಿರಂಗನ ಬೆಟ್ಟ, ಚಾಮರಾಜನಗರದ ಸರ್ಕಾರಿ ಮೆಡಿಕಲ್ ಕಾಲೇಜು ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 15 ಕಿ.ಮೀ. ವ್ಯಾಪ್ತಿಯಲ್ಲಿ ಮಾನವರಹಿತ ಏರ್ ಕ್ರಾಫ್ಟ್ ಬಳಕೆ, ಏರ್ ಬಲೂನ್ ಗಳ ಹಾರಾಟ, ಬ್ಯಾನರ್ ಬಂಟಿಂಗ್ಸ್ ಅಳವಡಿಕೆ ನಿಷೇಧ ಮಾಡಲಾಗಿದೆ.