ನವದೆಹಲಿ: ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳ ರದ್ದು ಪ್ರಕ್ರಿಯೆ ಇವತ್ತು ಅಧಿಕೃತವಾಗಿ ಪೂರ್ಣಗೊಂಡಿದೆ. ಇದಕ್ಕೆ ಸಂಬಂಧಿಸಿದ ವಿಧೇಯಕಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.
Advertisement
ರೈತರ ಪ್ರತಿಭಟನೆಗೆ ಮಣಿದು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ಮೋದಿ ಅವರು ಘೋಷಿಸಿದ ಬಳಿಕ ಸಂಸತ್ ಅಧಿವೇಶನದಲ್ಲಿ ಕಾಯ್ದೆಗಳನ್ನು ಹಿಂಪಡೆಯುವ ಮಸೂದೆ ಅಂಗೀಕಾರಕ್ಕೆ ಕೇಂದ್ರ ಸರ್ಕಾರ ಮುಂದಾಯಿತು. ಚರ್ಚೆಗೆ ಒಳಪಡಿಸದೇ ಮಸೂದೆಗಳ ಅಂಗೀಕಾರ ಸರಿಯಲ್ಲ. ಪ್ರತಿಭಟನೆ ವೇಳೆ ನೂರಾರು ರೈತರು ಸಾವನ್ನಪ್ಪಿದ್ದಾರೆ. ಅವರಿಗೆ ಕೇಂದ್ರ ಸರ್ಕಾರ ಪರಿಹಾರ ನೀಡಬೇಕು. ಹೀಗಾಗಿ ಮಸೂದೆಯನ್ನು ಚರ್ಚೆಗೆ ಒಳಪಡಿಸಬೇಕು ಎಂದು ವಿಪಕ್ಷಗಳು ಒತ್ತಾಯಿಸಿದ್ದವು. ಪ್ರತಿಪಕ್ಷಗಳ ವಿರೋಧದ ನಡುವೆಯೂ ಮಸೂದೆಗೆ ಅಂಗೀಕಾರ ನೀಡಲಾಗಿದ್ದು, ಇದೀಗ ಅಧಿಕೃತವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ. ಇದನ್ನೂ ಓದಿ: ಪ್ರತಿಭಟನೆಯಲ್ಲಿ ಮೃತಪಟ್ಟ ರೈತರ ಬಗ್ಗೆ ದಾಖಲೆಗಳಿಲ್ಲ, ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ: ಕೇಂದ್ರ ಸರ್ಕಾರ
Advertisement
Advertisement
ಸಂಸತ್ ಅಧಿವೇಶನದಲ್ಲಿ ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ಹೋರಾಟ ನಡೆಸುವ ವೇಳೆ ಸಾವನ್ನಪ್ಪಿದ ರೈತರ ಬಗ್ಗೆ ತಮ್ಮ ಬಳಿ ಮಾಹಿತಿ ಇಲ್ಲ. ಹೀಗಾಗಿ ಪರಿಹಾರ ನೀಡುವ ಪ್ರಶ್ನಯೇ ಉದ್ಭವಿಸಲ್ಲ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮಾರ್ ಸಂಸತ್‍ಗೆ ಲಿಖಿತ ಉತ್ತರ ನೀಡಿದ್ದಾರೆ. ತೋಮರ್ ಉತ್ತರಕ್ಕೆ ವಿಪಕ್ಷಗಳು ತೀವ್ರ ಆಕ್ರೋಶ ಹೊರಹಾಕಿವೆ. ಹುತಾತ್ಮ ರೈತರ ಕುಟುಂಬಗಳಿಗೆ ಪರಿಹಾರ ನೀಡಬೇಕೆಂದು ವಿಪಕ್ಷಗಳು ಒತ್ತಾಯಿಸಿದ್ದವು. ವಿಪಕ್ಷಗಳು ರೈತ ಸಂಘಗಳ ಮುಖಂಡರು ಹೇಳುವ ಪ್ರಕಾರ, ಹೋರಾಟದ ವೇಳೆ 700ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಮಧ್ಯೆ, ರೈತರ ಉತ್ಪನ್ನಗಳಿಗೆ ಎಂಎಸ್‍ಪಿ ನೀಡುವ ಸಂಬಂಧ ಕೇಂದ್ರ ಸರ್ಕಾರ ರಚಿಸಲಿರುವ ಸಮಿತಿಗೆ ಐವರ ಹೆಸರು ಸೂಚಿಸುವಂತೆ ರೈತ ಸಂಘಟನೆಗಳಿಗೆ ಕೇಂದ್ರ ಸರ್ಕಾರ ಮನವಿ ಮಾಡಿಕೊಂಡಿದೆ, ಡಿಸೆಂಬರ್ 4ರ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ರೈತ ಸಂಘಟನೆಗಳು ತಿಳಿಸಿವೆ. ಇದನ್ನೂ ಓದಿ: ಮೈತ್ರಿ ಬಗ್ಗೆ ಪ್ರಧಾನಿ ಮೋದಿ, ಅಮಿತ್ ಶಾ ಜೊತೆ ಮಾತನಾಡಿದ್ದೇನೆ: ಅಮರೀಂದರ್ ಸಿಂಗ್
Advertisement