ಚಾಮರಾಜನಗರ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೂರು ದಿನಗಳ ಕಾಲ ರಾಜ್ಯ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ. ಅಕ್ಟೋಬರ್ 7 ರಂದು ಚಾಮರಾಜನಗರಕ್ಕೆ ಆಗಮಿಸಲಿದ್ದಾರೆ.
ಅ.6 ರಿಂದ 8 ರವರೆಗೆ ರಾಮನಾಥ್ ಕೋವಿಂದ್ ರಾಜ್ಯ ಪ್ರವಾಸದಲ್ಲಿರಲಿದ್ದಾರೆ. ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೇಗುಲಗಳಿಗೆ ಭೇಟಿ ನೀಡಲಿದ್ದಾರೆ. ಅ.6ರ ಸಂಜೆ 5.30ಕ್ಕೆ ರಾಜಭವನದಲ್ಲಿ ಹೈಕೋರ್ಟ್ ನ್ಯಾಯಾಧೀಶರು ಮತ್ತು ಅವರ ಕುಟುಂಬಸ್ಥರೊಂದಿಗೆ ಚಹಾ ಕೂಟದಲ್ಲಿ ಭಾಗಿಯಾಗಲಿದ್ದಾರೆ.
Advertisement
Advertisement
ಅ.07 ರ ಬೆಳಗ್ಗೆ 11.40ಕ್ಕೆ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಬಳಿಕ 3.30 ರಿಂದ 4.30ರವರೆಗೆ ಚಾಮರಾಜನಗರ ಮೆಡಿಕಲ್ ಕಾಲೇಜಿನ 450 ಹಾಸಿಗೆಗಳ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ.
Advertisement
ಅ.08 ರ ಬೆಳಗ್ಗೆ 11.50ಕ್ಕೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು ರಾಷ್ಟ್ರಪತಿಗಳ ಪ್ರವಾಸ ಪಟ್ಟಿಯನ್ನು ರಾಷ್ಟ್ರಪತಿಗಳ ಆಪ್ತ ಕಾರ್ಯದರ್ಶಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಾನಿಸಿದ್ದಾರೆ. ಇದನ್ನೂ ಓದಿ: ಪ್ರೀತಿಸಿ ಮದ್ವೆಯಾದವಳು ನೆರೆ ಮನೆಯವನೊಂದಿಗೆ ಎಸ್ಕೇಪ್- ವೀಡಿಯೋ ಮಾಡಿ ಪತಿ ಆತ್ಮಹತ್ಯೆ
Advertisement
ಕಳೆದ ಎರಡು ದಿನಗಳ ಹಿಂದೆ ರಾಷ್ಟ್ರಪತಿ ಭವನದ ಸೂಚನೆ ಮೇರೆಗೆ ಚಾಮರಾಜನಗರದ ಎಡಿಸಿ ಕಾತ್ಯಾಯಿನಿ ದೇವಿ ನೇತೃತ್ವದಲ್ಲಿ ಬಿಳಿಗಿರಿರಂಗನ ಬೆಟ್ಟ ಹಾಗೂ ಚಾಮರಾಜನಗರದ ಯಡಪುರ ಬಳಿ ಜಾಗ ಗುರುತಿಸಿದ್ದಾರೆ.
ಚಾಮರಾಜನಗರ ಹೊರ ವಲಯದಲ್ಲಿರುವ ಯಡಬೆಟ್ಟದ ಮೆಡಿಕಲ್ ಕಾಲೇಜಿನ ಬಳಿ ಸುಮಾರು 163 ಕೋಟಿ ರೂ.ವೆಚ್ಚದಲ್ಲಿ 450 ಬೆಡ್ ಸೌಲಭ್ಯವುಳ್ಳ ಆಸ್ಪತ್ರೆ ನಿರ್ಮಾಣಗೊಂಡಿದ್ದು ಉದ್ಘಾಟನೆಗಾಗಿ ಕಾಯುತ್ತಿದೆ. ಇದನ್ನೂ ಓದಿ: ಸಿನಿಮಾ ಸ್ಟೈಲ್‍ನಲ್ಲಿ ಪತ್ನಿ ಕೊಲೆಗೆ ಸ್ಕೆಚ್- ವಿಫಲವಾದ ನಂತ್ರ ಚಾಕುವಿಂದ ಇರಿದು ಕೊಂದ!