ರಾಮನಗರ: ಬಿಡದಿ ಸಮೀಪದ ಅಮೃತ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ ಮೆಂಟ್ ಸೈನ್ಸ್ ಕಾಲೇಜಿನ ನೂತನ ಕ್ಯಾಂಪಸ್ ಕಟ್ಟಡ ಹಾಗೂ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ 111 ನೇ ವಾರ್ಷಿಕೋತ್ಸವ ಕಾರ್ಯಕ್ರಮವಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಚಾಲನೆ ನೀಡಿದರು.
ಬಿಡದಿಯ ತಿಮ್ಮೇಗೌಡನದೊಡ್ಡಿ ಬಳಿಯಿರುವ ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ರಾಷ್ಟ್ರಪತಿಗಳು, ವಿದ್ಯಾರ್ಥಿಗಳು ರಾಷ್ಟ್ರದ ಭವಿಷ್ಯ ರೂಪಿಸುವ ಶಕ್ತಿಯಾಗಿದ್ದು, ತಾಂತ್ರಿಕ ಶಿಕ್ಷಣ ಕಲಿಯುತ್ತಿರುವ ವಿದ್ಯಾರ್ಥಿಗಳು, ಉದ್ಯೋಗವನ್ನು ಅರಸದೇ ಉದ್ಯೋಗ ಸೃಷ್ಠಿಸುವ ಶಕ್ತಿಯಾಗಿ ರೂಪುಗೊಳ್ಳಬೇಕು. ಜ್ಞಾನ ಎಂಬುದು ಪುಸ್ತಕಕ್ಕೆ ಸೀಮಿತವಾಗದೆ ಜ್ಞಾನವನ್ನು ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕು. ರಾಷ್ಟ್ರ ಕಟ್ಟುವ ಕೆಲಸಕ್ಕೆ ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಕರೆ ನೀಡಿದರು.
Advertisement
Advertisement
Advertisement
ಕಾರ್ಯಕ್ರಮದಲ್ಲಿ ಮುಖ್ಯ ಆತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಕೇಂದ್ರ ಸಚಿವ ಅನಂತ್ ಕುಮಾರ್ ಅವರು, ಇತಿಹಾಸದಲ್ಲಿಯೇ ಮೊದಲ ಸಂಸತ್‍ನ್ನು ರಚಿಸಿದ ಬಸವಣ್ಣನವರ ಕೊಡುಗೆಯಾಗಿ ಬಸವೇಶ್ವರ ವಿದ್ಯಾವರ್ಧಕ ಸಂಘವು ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವಾಗಿದೆ ಎಂದು ತಿಳಿಸಿದರು. ಇನ್ನು ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯ್ ವಾಲಾ, ಸಂಸದ ಡಿ.ಕೆ ಸುರೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.