ನವದೆಹಲಿ: ಭಾರತದ 15ನೇ ರಾಷ್ಟ್ರಪತಿ ಚುನಾವಣೆ ಸೋಮವಾರ ಭರದಿಂದ ಸಾಗಿದ್ದು, ದೇಶಾದ್ಯಂತ ಗಣ್ಯರು ಮತ ಚಲಾಯಿಸಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಇಂದು ರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಿದ್ದು, ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ವ್ಹೀಲ್‌ಚೇರ್‌ನಲ್ಲಿ ಕಾಣಿಸಿಕೊಂಡಿದ್ದಾರೆ.
ಸಂಸತ್ತಿನ ಆವರಣದಲ್ಲಿ ಚುನಾವಣೆಗೆ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ದೇವೇಗೌಡರು ಕಾಲು ನೋವಿನ ಹಿನ್ನೆಲೆ ವ್ಹೀಲ್ ಚೇರ್‌ನಲ್ಲಿ ಮತ ಚಲಾಯಿಸಲು ಆಗಮಿಸಿದ್ದರು. ಮತದಾನ ಮಾಡಿದ ಬಳಿಕ ದೇವೇಗೌಡರು ವಾಪಸ್ಸಾಗಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ- ವ್ಹೀಲ್ ಚೇರ್‌ನಲ್ಲಿ ಬಂದು ಮತ ಹಾಕಿದ ಮನಮೋಹನ್ ಸಿಂಗ್
Advertisement
Advertisement
ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಪಕ್ಷದ ರಾಜಕಾರಣವನ್ನು ಮೀರಿ ಬೆಂಬಲ ನೀಡುವುದಾಗಿ ಜೆಡಿಎಸ್ ಸರ್ವಾನುಮತದ ನಿರ್ಣಯ ಕೈಗೊಂಡಿತ್ತು. ಇದನ್ನೂ ಓದಿ: ದ್ರೌಪದಿ ಮುರ್ಮು, ಸಿನ್ಹಾ ಇಬ್ಬರಿಗೂ ವೋಟು ಹಾಕಲ್ಲ: ರಾಷ್ಟ್ರಪತಿ ಚುನಾವಣೆ ಬಹಿಷ್ಕರಿಸಿದ ಅಕಾಲಿ ದಳ ಶಾಸಕ
Advertisement
Advertisement
ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾದ ಮರುದಿನವೇ ಹೆಚ್.ಡಿ ದೇವೇಗೌಡರಿಗೆ ದೂರವಾಣಿ ಕರೆ ಮಾಡಿ ಬೆಂಬಲ ಯಾಚಿಸಿದ್ದರು. ದ್ರೌಪದಿ ಮುರ್ಮು ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭ ಖುದ್ದಾಗಿ ದೇವೇಗೌಡ ಹಾಗೂ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮತ ಕೇಳಿದ್ದರು.