– ದೇಶದಲ್ಲಿ 5 ದಿನ ಶೋಕಾಚರಣೆ
ಟೆಹ್ರಾನ್: ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Risi) ಹೆಲಿಕಾಪ್ಟರ್ ಅಪಘಾತದಲ್ಲಿ (Helicopter Crash) ನಿಧನರಾದ ನಂತರ ಇರಾನ್ ದೊಡ್ಡ ಘೋಷಣೆಯೊಂದನ್ನು ಮಾಡಿದೆ. ರೈಸಿ ಅವರ ಸಾವಿನ ಬಳಿಕ ದೇಶದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಸಲು ಇರಾನ್ ನಿರ್ಧರಿಸಿದೆ. ಜೂನ್ 28 ರಂದು ಇರಾನ್‌ನಲ್ಲಿ ಅಧ್ಯಕ್ಷೀಯ ಚುನಾವಣೆ (Iran Presidential Election) ನಡೆಯಲಿದೆ ಎಂದು ಹೇಳಿಕೆ ತಿಳಿಸಿದೆ.
ಸರ್ಕಾರ ಮತ್ತು ಸಂಸತ್ತಿನ ಮುಖ್ಯಸ್ಥರ ಸಭೆಯಲ್ಲಿ 14 ನೇ ಅಧ್ಯಕ್ಷೀಯ ಚುನಾವಣೆಯನ್ನು ಜೂನ್ 28 ರಂದು ನಡೆಸಲು ನಿರ್ಧರಿಸಲಾಯಿತು ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಈ ನಡುವೆ ಉಪಾಧ್ಯಕ್ಷ ಮೊಹಮ್ಮದ್ ಮೊಖ್ಬರ್ ಅವರನ್ನು ದೇಶದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ದೇಶದಲ್ಲಿ 5 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಲಾಗಿದೆ. ಇದನ್ನೂ ಓದಿ: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಗೌರವಾರ್ಥ ಮಂಗಳವಾರ ಭಾರತದಲ್ಲಿ ಶೋಕಾಚರಣೆ
- Advertisement
- Advertisement
ಹೆಲಿಕಾಪ್ಟರ್ ಪತನ: ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್ ಭಾನುವಾರದಂದು ದಟ್ಟವಾದ ಮಂಜಿನಿಂದಾಗಿ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದ ಪರ್ವತ ಅರಣ್ಯ ಪ್ರದೇಶದಲ್ಲಿ ಪತನಗೊಂಡಿದೆ. ಪ್ರತಿಕೂಲ ಹವಾಮಾನದಿಂದಾಗಿ, ಶೋಧ ಮತ್ತು ರಕ್ಷಣಾ ತಂಡಗಳು ಅಪಘಾತದ ಸ್ಥಳವನ್ನು ತಲುಪಲು ಸಾಕಷ್ಟು ಪ್ರಯಾಸಪಡಬೇಕಾಯಿತು. ಕೊನೆಗೆ ಸೋಮವಾರ ಮುಂಜಾನೆ ಅವಘಡ ನಡೆದ ಸ್ಥಳಕ್ಕೆ ತಲುಪಲು ಸಾಧ್ಯವಾಯಿತು. ಈ ಅಪಘಾತದಲ್ಲಿ ಇರಾನ್‌ನ ವಿದೇಶಾಂಗ ಸಚಿವರೂ ಮೃತಪಟ್ಟಿದ್ದಾರೆ.