ಬೆಂಗಳೂರು: ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಸಂಸದೆ ಸುಮಲತಾ ಅಂಬರೀಶ್ ಬೆಂಬಲವನ್ನು ಸೂಚಿಸಿದ್ದಾರೆ.
ಸಂಸದೆ ಸುಮಲತಾ ಅವರು ಬಿಜೆಪಿ ಸಭೆ ನಡೆಯುತ್ತಿದ್ದ ಹೋಟೆಲ್ಗೆ ಆಗಮಿಸಿ, ಸಭೆಯಲ್ಲಿ ಭಾಗವಹಿಸಿದರು. ಈ ವೇಳೆ ಎನ್ಡಿಎ ಅಭ್ಯರ್ಥಿಗೆ ಬೆಂಬಲ ಸೂಚಿಸುವುದಾಗಿ ತಿಳಿಸಿದ್ದಾರೆ. ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ಸಭೆಯಲ್ಲಿ ಭಾಗಿ ವಿಚಾರವಾಗಿ ಮಾತನಾಡಿ, ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಸ್ಪಷ್ಟಪಡಿಸಿದರು. ಇದನ್ನೂ ಓದಿ: ಶ್ರೀಲಂಕಾಕ್ಕೆ ಭಾರತ ಯಾವಾಗಲೂ ಬೆಂಬಲ ನೀಡುತ್ತೆ: ಜೈಶಂಕರ್
Advertisement
Advertisement
ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಪ್ರಚಾರದ ನಿಮಿತ್ತ ರಾಜ್ಯ ರಾಜಧಾನಿ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಖಾಸಗಿ ಹೋಟೆಲ್ಗೆ ಆಗಮಿಸಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಚಿವರು ಇದ್ದರು. ಆದರೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ತಡವಾಗಿ ಆಗಮಿಸಿದರು. ಇದನ್ನೂ ಓದಿ: ಬೆಂಗಳೂರಿಗೆ ಆಗಮಿಸಿದ ದ್ರೌಪದಿ ಮುರ್ಮು