ಸುದ್ದಿಗೋಷ್ಠಿ ಕರೆದು ಸಿದ್ದರಾಮಯ್ಯ ವಿರುದ್ಧ ಅಶ್ಲೀಲ ಮಾತು

Public TV
1 Min Read
kuruba samaja siddaramiah target

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಬಗ್ಗೆ ಕುರುಬ ಸಮುದಾಯದ ಮುಖಂಡರು ಕೆಟ್ಟಪದಗಳಲ್ಲಿ ಅವಹೇಳನ ಮಾಡಿ ಈಗ ಸುದ್ದಿಯಾಗಿದ್ದಾರೆ.

ರಾಜ್ಯ ಸರ್ಕಾರದಲ್ಲಿ ಕುರುಬರಿಗೆ ರಾಜಕೀಯ ಅಧಿಕಾರ ನೀಡಲು ಆಗ್ರಹಿಸಿ ಕುರುಬ ಸಮಾಜದ ಮುಖಂಡರು ಖಾಸಗಿ ಹೋಟೆಲ್‍ನಲ್ಲಿ ಸುದ್ದಿಗೋಷ್ಠಿ (Press Meet) ನಡೆದಿತ್ತು. ಈ ವೇಳೆ ಸುದ್ದಿಗೋಷ್ಠಿ ಮಾಡಲು ಬಂದಿದ್ದ ಕುರುಬ ಸಮುದಾಯದ ಮುಖಂಡರಾದ ಮುಕುಡಪ್ಪ, ಪುಟ್ಟಸ್ವಾಮಿ ಅವರು ಗೋಷ್ಠಿಗೂ ಮುನ್ನ ಮಾತನಾಡುತ್ತ ಕುಳಿತಿದ್ದರು. ಆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಟ್ಟ ಶಬ್ದವನ್ನು ಬಳಸಿ ಅವಮಾನ ಮಾಡಿದ್ದಾರೆ.

kuruba samaja siddaramiah target 1

ವೀಡಿಯೋದಲ್ಲಿ ಏನಿದೆ?:
ಮುಕುಡಪ್ಪ ಹಾಗೂ ಪುಟ್ಟಸ್ವಾಮಿ ಇಬ್ಬರು 20 ಕುರಿಗಳ ಮೇಲೆ ಒಂದು ಟಗರು ಎಗರಿ ಬೀಳುತ್ತೆ ಎಂದು ಮಾತನಾಡುತ್ತಿದ್ದರು. ಆ ವೇಳೆ ಮುಕುಡಪ್ಪ, ಯಾರು ಅಂತಾ ಅಲ್ಲ ಎಲ್ಲರೂ ಹೇಳುತ್ತಾರೆ. ಆಗ ಮುಕುಡಪ್ಪ, ಎಲ್ಲರದ್ದೂ ಅಷ್ಟೇ, ಕೆಲವರದ್ದು ಹೊರಗೆ ಬರುತ್ತೆ, ಕೆಲವರದ್ದು ಹೊರಗೆ ಬರಲ್ಲ ಅಷ್ಟೇ ಎಂದು ಹೇಳುತ್ತಾರೆ.

siddaramaiah 5

ಆಗ ಸಿದ್ದರಾಮಯ್ಯ ಅವರನ್ನು ಹೆಸರನ್ನು ಪ್ರಸ್ತಾಪಿಸಿ ಅವಹೇಳನ ಮಾಡುತ್ತಾರೆ. ಸಿದ್ದರಾಮಯ್ಯನ ಬಗ್ಗೆ ಮಾತನಾಡುವಾಗ ಹುಷಾರು.. ಸೂ.. ಮಗಾ ಎಂದು ಹೇಳಿ ಮುಕ್ಕಡಪ್ಪ ನಗುತ್ತಾನೆ. ಅದಕ್ಕೆ ಪುಟ್ಟಸ್ವಾಮಿ ಪ್ರತಿಕ್ರಿಯಿಸಿ, ಹೌದು, ಅವನು ಬುದ್ಧಿವಂತ.. ಮನೆ ಒಳಗೆ ಸೇರಿಕೊಂಡುಬಿಡ್ತಾನೆ ಎಂದು ಹೇಳುತ್ತಾರೆ. ಇದನ್ನೂ ಓದಿ: ಶೋಕಿಗೆ ಕಾರು, ಕದಿಯೋದು ಮಾತ್ರ ಬಲ್ಬ್ – ಕಿರಾತಕರ ಕೈಚಳ ಕ್ಯಾಮೆರಾದಲ್ಲಿ ಸೆರೆ

ಅಹಿಂದ ಮುಖಂಡ ಮುಕ್ಕಡಪ್ಪ ಹಾಗೂ ಪುಟ್ಟಸ್ವಾಮಿ ಅವರು ಸಿದ್ದರಾಮಯ್ಯ ಅವರ ಬಗ್ಗೆ ಅಶ್ಲೀಲವಾಗಿ ಮಾತನಾಡಿರುವ ಈ ವೀಡಿಯೋಕ್ಕೆ (Video) ಸಿದ್ದರಾಮಯ್ಯನ ಅಭಿಮಾನಿಗಳಿಂದ ವ್ಯಾಪಕ ಆಕ್ರೋಶ ಕೇಳಿಬರುತ್ತಿದೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಕೇಸ್ – ಸಂಜಯ್ ರಾವತ್‌ಗೆ ಜಾಮೀನು

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *