ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು 3 ಕ್ಷೇತ್ರಗಳ ಉಪ ಚುನಾವಣೆ(Channapatna By Election) ಕುರಿತು ಭಾನುವಾರ (ಇಂದು) ಜೆಡಿಎಸ್ ಸಿದ್ಧತೆ ಸಭೆ ನಡೆಸಿತು. ಕೇಂದ್ರ ಸಚಿವ ಕುಮಾರಸ್ವಾಮಿ (HD Kumaraswamy) ನೇತೃತ್ವದಲ್ಲಿ ಜಿಲ್ಲಾ ಅಧ್ಯಕ್ಷರು, ಹಾಲಿ, ಮಾಜಿ ಶಾಸಕರು ಸಭೆ ನಡೆಸಿದ್ರು.
Advertisement
ಸಭೆಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆಗೆ ನಾಯಕರು ಜಿಲ್ಲಾ ಪ್ರವಾಸ ಮಾಡುವಂತೆ ನಿರ್ಣಯ ಅಂಗೀಕಾರ ಮಾಡಲಾಯ್ತು. ಇತ್ತ ಚನ್ನಪಟ್ಟಣ ಟಿಕೆಟ್ ಫೈನಲ್ ಮಾಡೋ ಬಗ್ಗೆ ಬಿಜೆಪಿ ಹೈಕಮಾಂಡ್ (BJP High Command) ನಾಯಕರ ಜೊತೆ ಚರ್ಚೆ ಮಾಡಿ ಒಮ್ಮತದ ಅಭ್ಯರ್ಥಿಯನ್ನ ಕಣಕ್ಕಿಳಿಸುವ ನಿರ್ಧಾರ ಮಾಡಲಾಯ್ತು. ಚನ್ನಪಟ್ಟಣ ಕ್ಷೇತ್ರ ಜೆಡಿಎಸ್ ಕ್ಷೇತ್ರವಾಗಿದ್ದು, ಜೆಡಿಎಸ್‌ಗೆ ಟಿಕೆಟ್ ಪಡೆಯುವಂತೆ ಸಭೆಯಲ್ಲಿ ಚನ್ನಪಟ್ಟಣ ನಾಯಕರು ಕುಮಾರಸ್ವಾಮಿಗೆ ಒತ್ತಡ ಹಾಕಿದ್ರು. ಇದನ್ನೂ ಓದಿ: 3,000ಕ್ಕೂ ಅಧಿಕ ಅಡಿಕೆ ಮರ, 200ಕ್ಕೂ ಅಧಿಕ ತೆಂಗಿನ ಮರಗಳು ನೆಲಸಮ
Advertisement
\
Advertisement
ಬಿಜೆಪಿ ಹೈಕಮಾಂಡ್ ಜೊತೆ ಚರ್ಚೆ ಮಾಡಿ ಒಮ್ಮತದ ಅಭ್ಯರ್ಥಿ ನಿಲ್ಲಿಸಲಾಗುತ್ತದೆ ಅಂತ ಕುಮಾರಸ್ವಾಮಿ ನಾಯಕರಿಗೆ ಮನವರಿಕೆ ಮಾಡಿದರು. ಇದರ ಬೆನ್ನಲ್ಲೇ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣದಿಂದ ಸ್ಪರ್ಧೆ ಮಾಡುವ ಬಗ್ಗೆ ಸ್ವತಃ ಅಡ್ಡಗೋಡೆ ಮೇಲೆ ದೀಪ ಇಟ್ಡಂತೆ ಮಾತಾಡಿದ್ರು. ಇದನ್ನೂ ಓದಿ: ಟ್ರೈನಿ ವೈದ್ಯೆ ಅತ್ಯಾಚಾರ & ಹತ್ಯೆ ಕೇಸ್; ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ
Advertisement
ಸೋಮವಾರ (ಆ.19) ಬಿಜೆಪಿ ನಡೆಸುವ ಹೋರಾಟಕ್ಕೆ ಜೆಡಿಎಸ್ ಸಹ ಬೆಂಬಲ ಕೊಟ್ಟು ಹೋರಾಟ ಮಾಡುವ ನಿರ್ಧಾರವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು. ಸಭೆ ಬಳಿಕ ಮಾತನಾಡಿದ ನಿಖಿಲ್, ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಅಂತ ಒತ್ತಾಯ ಮಾಡಿದ್ರು. ಇದನ್ನೂ ಓದಿ: Bengaluru | ಹಣಕ್ಕಾಗಿ ತಾಯಿ-ಮಗನ ಕಿಡ್ನ್ಯಾಪ್ ಮಾಡಿ ಲೈಂಗಿಕ ಕಿರುಕುಳ – ರೌಡಿ ಶೀಟರ್ಸ್ ಗ್ಯಾಂಗ್ ಅರೆಸ್ಟ್