ಚಿಕ್ಕೋಡಿ: ಸಾಲ (Loan) ಮರುಪಾವತಿ ವಿಳಂಬವಾಗಿದ್ದಕ್ಕೆ ಮಹಿಳೆಯೊಬ್ಬಳು ರೈತನ ಪತ್ನಿ ಹಾಗೂ ಪುತ್ರನನ್ನು ಗೃಹ ಬಂಧನದಲ್ಲಿಟ್ಟಿದ್ದಕ್ಕೆ ಮನನೊಂದು ರೈತ (Farmer) ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಹುಕ್ಕೇರಿಯ (Hukkeri) ಇಸ್ಲಾಂಪುರದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ರಾಜು ಖೋತಗಿ ಎಂದು ಗುರುತಿಸಲಾಗಿದೆ. ಮೃತ ರಾಜು ರೈತನಾಗಿದ್ದು, ಭೀಕರ ಬರದಿಂದ ಬೆಳೆ ನಷ್ಟದಿಂದ ಅದೇ ಗ್ರಾಮದ ಸಿದ್ದವ್ವ ಬಯ್ಯನವರ ಎಂಬ ಮಹಿಳೆ ಬಳಿ 5 ತಿಂಗಳ ಹಿಂದೆ 1.5 ಲಕ್ಷ ರೂ. ಸಾಲ ಮಾಡಿದ್ದರು. ಎರಡು ದಿನದ ಹಿಂದೆ ಒಂದೇ ಬಾರಿಗೆ ಹಣ ಕೊಡುವಂತೆ ಸಿದ್ದವ್ವ ಕೇಳಿದ್ದಾಳೆ. ಹಣ ಕೊಡುವ ತನಕ ರೈತನ ಪತ್ನಿ ಹಾಗೂ ಪುತ್ರನನ್ನು ಮನೆಯಲ್ಲಿ ಬಿಟ್ಟು ಹೋಗುವಂತೆ ಹೇಳಿದ್ದಳು. ಬಳಿಕ ರೈತನ ಪತ್ನಿ ಹಾಗೂ ಪುತ್ರನನ್ನು ಎರಡು ದಿನದಿಂದ ಗೃಹ ಬಂಧನದಲ್ಲಿಟ್ಟಿದ್ದಳು. ಮಹಿಳೆ ಬಳಿ ರಾಜು ತನ್ನ ಪತ್ನಿ ಹಾಗೂ ಪುತ್ರನನ್ನು ಗೃಹಬಂಧನದಿಂದ ಬಿಡುವಂತೆ ಪರಿಪರಿಯಾಗಿ ಬೇಡಿಕೊಂಡರೂ ಬಿಡುಗಡೆ ಮಾಡದಿರುವ ಕಾರಣ ಮನನೊಂದು ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಅಪ್ರಾಪ್ತನ ಹುಚ್ಚಾಟಕ್ಕೆ ಇಬ್ಬರು ಟೆಕ್ಕಿಗಳು ಬಲಿ – ಅಪಘಾತದ ಬಗ್ಗೆ ಪ್ರಬಂಧ ಬರೆಯುವಂತೆ ಸೂಚಿಸಿದ ಕೋರ್ಟ್
Advertisement
Advertisement
ರಾಜು ಪಡೆದಿದ್ದ ಸಾಲಕ್ಕೆ ಪ್ರತಿ ತಿಂಗಳು 10%ರಷ್ಟು ಬಡ್ಡಿಯನ್ನು ಕಟ್ಟುತ್ತಿದ್ದರು. ಅಲ್ಲದೇ ಒಂದೇ ಬಾರಿ ಹಣ ಮರಳಿಸುವಂತೆ ಸಿದ್ದವ್ವ ಕೇಳಿದಾಗ ಎರಡು ದಿನ ಕಾಲಾವಕಾಶ ಕೇಳಿದ್ದ ಎಂದು ತಿಳಿದು ಬಂದಿದೆ. ಇದಕ್ಕೆ ಒಪ್ಪದ ಮಹಿಳೆಯು ರೈತ, ಪತ್ನಿ ಹಾಗೂ ಪುತ್ರನನ್ನು ಗೃಹ ಬಂದನದಲ್ಲಿಟ್ಟಿದ್ದಳು. ಒಂದು ದಿನದ ಬಳಿಕ ರಾಜುನನ್ನು ಬಿಡುಗಡೆ ಮಾಡಿ, ಮಗ ಮತ್ತು ಪತ್ನಿಯನ್ನು ಗೃಹಬಂಧನದಲ್ಲಿಟ್ಟಳು.
Advertisement
Advertisement
ಈ ಸಂಬಂಧ ದೂರು ನೀಡಲು ತೆರಳಿದಾಗ ಪೊಲೀಸರು ವಿಳಂಬ ಮಾಡಿದ್ದಾರೆ. ಬೆಳಗ್ಗೆಯಿಂದ ಠಾಣೆಯಲ್ಲಿ ಕೂರಿಸಿಕೊಂಡು ರಾತ್ರಿ ವೇಳೆ ದೂರು ದಾಖಲಿಸಿಕೊಂಡಿದ್ದಾರೆ ಎಂದು ಯಮಕನಮರಡಿ ಠಾಣೆ ಪೊಲೀಸರ (Yamakanmardi police) ವಿರುದ್ಧ ರೈತನ ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಕೊವಾಕ್ಸಿನ್ ಅಡ್ಡ ಪರಿಣಾಮ ಅಧ್ಯಯನ – ಸಂಶೋಧನಾ ವರದಿ ಕಳಪೆ ಎಂದ ICMR