ಬೀದರ್: ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಬೇಸತ್ತು ಶಾಲೆಯ ಮಹಡಿ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೀದರ್ (Bidar) ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ನಡೆದಿದೆ.
ಮದಿಯಾ ನಶೀರ್ ಪಾಷಾ (16) ಆತ್ಮಹತ್ಯೆಗೆ ಶರಣಾದ ಬಾಲಕಿ. ಭೆಮಳಖೇಡ ಗ್ರಾಮದ ಶಾಲೆಯೊಂದರಲ್ಲಿ ಹತ್ತನೇ ತರಗತಿ ಓದುತ್ತಿದ್ದರುವುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ಮೈಕ್ರೋವೇವ್, ಇಂಡಕ್ಷನ್ ಸ್ಟವ್ ಬಳಕೆಗೆ ಸೂಚನೆ – ರೈಲ್ವೇ ಕೇಟರಿಂಗ್‌ಗೂ ತಟ್ಟಿದ ಗ್ಯಾಸ್ ಸಿಲಿಂಡರ್ ಅಭಾವ
ಸಹಪಾಠಿಯಿಂದ ಲವ್ ಮಾಡುವಂತೆ ಚುಡಾಯಿಸಿದಕ್ಕೆ ಹಾಗೂ ಪ್ರೀತಿಸುವಂತೆ ಒತ್ತಡ ಹಾಕಿದ್ದಕ್ಕೆ ಶಾಲಾ ಕಟ್ಟಡದ ಮೇಲಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಾಲಕಿಗೆ ಸಹಪಾಠಿ ಚುಡಾಯಿಸಿದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈವರೆಗೂ ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಭೆಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.ಇದನ್ನೂ ಓದಿ: IEA ಇತಿಹಾಸದಲ್ಲಿ ಫಸ್ಟ್ ಟೈಂ 400 ಮಿಲಿಯನ್ ಬ್ಯಾರೆಲ್ ತೈಲ ಬಿಡುಗಡೆಗೆ 32 ದೇಶಗಳು ಒಪ್ಪಿಗೆ

