ಬೆಂಗಳೂರು: ತಾವು ಪೊಲೀಸರೆಂದು (Fake Police) ಹೇಳಿ, ಯಾಮಾರಿಸಿ ವಿದೇಶಿ ಪ್ರಜೆಯ (Foreigner) 4 ಲಕ್ಷ ರೂ. ಮೌಲ್ಯದ ಹಣವನ್ನು (Money) ದುಷ್ಕರ್ಮಿಗಳು ದೋಚಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.
Advertisement
ವೈದ್ಯಕೀಯ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ಯೆಮನ್ ದೇಶದ ಪ್ರಜೆ ಗೇದ್ ಸೈಫ್ ಮೋಕ್ಬೆಲ್ ಅವರ ಹಣವನ್ನು ದುಷ್ಕರ್ಮಿಗಳು ದೋಚಿದ್ದಾರೆ. ಮೋಕ್ಬೆಲ್ ಕಮ್ಮನಹಳ್ಳಿಯ ಎಂಪೈರ್ ಹೋಟೆಲಿಗೆ ಹೋಗುತ್ತಿದ್ದ ಸಂದರ್ಭ ಕಾರನ್ನು ತಡೆದ ಅಪರಿಚಿತರು ನಾವು ಪೊಲೀಸರು, ಕಾರನ್ನು ಪರಿಶೀಲಿಸಬೇಕೆಂದು ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಅಹಮದಾಬಾದ್ ತಂತ್ರ – ಒಂದೇ ದಿನ ಬೆಂಗಳೂರಿನಲ್ಲಿ ಮೆಗಾ ರೋಡ್ ಶೋ
Advertisement
ಆರೋಪಿಗಳು ಬಿಳಿ ಬಣ್ಣದ ಕಾರಿನಲ್ಲಿ ಬಂದಿದ್ದು, ವಿದೇಶಿ ವ್ಯಕ್ತಿಯ ಕಾರನ್ನು ಪರಿಶೀಲಿಸಿದ್ದಾರೆ. ಬಳಿಕ ಆತನ ಪಾಕೇಟ್‌ನಲ್ಲಿದ್ದ 5,000 ಅಮೆರಿಕನ್ ಡಾಲರ್ (ಸುಮಾರು 4 ಲಕ್ಷ ರೂ.) ಅನ್ನು ದೋಚಿ ಪರಾರಿಯಾಗಿದ್ದಾರೆ.
Advertisement
Advertisement
ಘಟನೆಗೆ ಸಂಬಂಧಿಸಿದಂತೆ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ಮತ ನೀಡಿದ್ರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ: ಯತ್ನಾಳ್