ಹಜ್‌ ಯಾತ್ರೆಯ ನೆಪದಲ್ಲಿ ಭಿಕ್ಷಕರನ್ನು ಕಳುಹಿಸಬೇಡಿ – ಪಾಕ್‌ಗೆ ಸೌದಿ ಎಚ್ಚರಿಕೆ

Public TV
1 Min Read
Mohammed bin Salman Al Saud Prime Minister of Saudi Arabia

ರಿಯಾದ್‌: ಹಜ್‌ ಯಾತ್ರೆಯ (Hajj) ನೆಪದಲ್ಲಿ ಪಾಕಿಸ್ತಾನದಿಂದ (Pakistan) ಗಲ್ಫ್‌ ರಾಷ್ಟ್ರಗಳಿಗೆ ಬರುತ್ತಿರುವ ಭಿಕ್ಷುಕರ ಸಂಖ್ಯೆ ಕಂಡು ಸೌದಿ ಅರೇಬಿಯಾ (Saudi Arabia) ಹೌಹಾರಿದೆ.

ಧಾರ್ಮಿಕ ಯಾತ್ರೆಗೆ ನೀಡಲಾಗುವ ಉಮ್ರಾ ವೀಸಾದಡಿ (Umrah Visa) ಸೌದಿ ಪ್ರವೇಶ ಮಾಡುತ್ತಿರುವ ಭಿಕ್ಷುಕರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ.

ಈ ಬೆನ್ನಲ್ಲೇ ಉಮ್ರಾ ಕಾಯ್ದೆ ಜಾರಿಗೆ ಪಾಕ್ ಮುಂದಾಗಿದೆ. ಯಾತ್ರೆ ಆಯೋಜಿಸುವ ಏಜೆಂಟರನ್ನು ನಿರ್ಬಂಧಿಸಲು ಸಿದ್ಧತೆ ನಡೆಸಿದೆ. ಪಾಕ್ ವಿದೇಶಾಂಗ ಇಲಾಖೆ ಪ್ರಕಾರ, ವಿದೇಶಗಳಲ್ಲಿರುವ ಭಿಕ್ಷುಕರಲ್ಲಿ 90% ಮಂದಿ ಪಾಕಿಸ್ತಾನದವರೇ ಆಗಿದ್ದಾರೆ. ಇದನ್ನೂ ಓದಿ: ದಿವಾಳಿಯಾಗಿರುವ ಪಾಕಿಸ್ತಾನಕ್ಕೆ ಐಎಂಎಫ್‌ನಿಂದ ಸಿಗುತ್ತಾ ಬೂಸ್ಟರ್‌ ಡೋಸ್‌!

Hajj

ಸೌದಿ ರಾಯಭಾರಿ ನವಾಫ್ ಬಿನ್ ಸೈದ್ ಅಹ್ಮದ್ ಅಲ್-ಮಲ್ಕಿ ಅವರನ್ನು ಭೇಟಿಯಾಗಿದ್ದ ಆಂತರಿಕ ಸಚಿವ ಮೊಹ್ಸಿನ್ ನಖ್ವಿ ಅವರು ಸೌದಿ ಅರೇಬಿಯಾಕ್ಕೆ ಭಿಕ್ಷುಕರನ್ನು ಕಳುಹಿಸುವ ಮಾಫಿಯಾ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು. ಇದನ್ನೂ ಓದಿ: ಭಯೋತ್ಪಾದನೆ ನಿಂತರೆ ಮಾತ್ರ ಪಾಕಿಸ್ತಾನದೊಂದಿಗೆ ಶಾಂತಿ: ರಾಜನಾಥ್‌ ಸಿಂಗ್‌

ಪಾಕಿಸ್ತಾನಿ ಭಿಕ್ಷುಕರು ಜಿಯಾರತ್ (ತೀರ್ಥಯಾತ್ರೆ) ನೆಪದಲ್ಲಿ ಮಧ್ಯಪ್ರಾಚ್ಯಕ್ಕೆ ಪ್ರಯಾಣಿಸುತ್ತಾರೆ. ಹೆಚ್ಚಿನ ಜನರು ಉಮ್ರಾ ವೀಸಾದಲ್ಲಿ ಸೌದಿ ಅರೇಬಿಯಾಕ್ಕೆ ಭೇಟಿ ನೀಡುತ್ತಾರೆ ಮತ್ತು ನಂತರ ಭಿಕ್ಷಾಟನೆ-ಸಂಬಂಧಿತ ಚಟುವಟಿಕೆಗಳಲ್ಲಿ ತೊಡಗುತ್ತಾರೆ ಎಂದು ಸಾಗರೋತ್ತರ ಪಾಕಿಸ್ತಾನಿಗಳ ಕಾರ್ಯದರ್ಶಿ ಜೀಶಾನ್ ಖಂಜಾದಾ ಕಳೆದ ವರ್ಷ ಹೇಳಿದ್ದರು.

ಇತ್ತೀಚೆಗೆ 11 ವ್ಯಕ್ತಿಗಳನ್ನು ಕರಾಚಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ಸೌದಿಗೆ ಭಿಕ್ಷೆ ಬೇಡಲು ತೆರಳುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಸೌದಿ ವಿಮಾನದಿಂದಲೇ ಅವರನ್ನು ಹೊರಹಾಕಲಾಗಿತ್ತು.

 

Share This Article