Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಂದಿನ ಸರ್ಕಾರ ಹಣವನ್ನು ಕಬ್ರಿಸ್ತಾನ್‍ಗಳಿಗಾಗಿ ವ್ಯರ್ಥ ಮಾಡಿದೆ: ಯೋಗಿ ಆದಿತ್ಯನಾಥ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಿಂದಿನ ಸರ್ಕಾರ ಹಣವನ್ನು ಕಬ್ರಿಸ್ತಾನ್‍ಗಳಿಗಾಗಿ ವ್ಯರ್ಥ ಮಾಡಿದೆ: ಯೋಗಿ ಆದಿತ್ಯನಾಥ್

Latest

ಹಿಂದಿನ ಸರ್ಕಾರ ಹಣವನ್ನು ಕಬ್ರಿಸ್ತಾನ್‍ಗಳಿಗಾಗಿ ವ್ಯರ್ಥ ಮಾಡಿದೆ: ಯೋಗಿ ಆದಿತ್ಯನಾಥ್

Public TV
Last updated: December 26, 2021 8:07 am
Public TV
Share
1 Min Read
yogi adithyanath
SHARE

ಲಕ್ನೋ: ಉತ್ತರ ಪ್ರದೇಶದಲ್ಲಿ ಈ ಹಿಂದೆ ಇದ್ದ ಸರ್ಕಾರ ಬಡವರಿಗಾಗಿ ಮೀಸಲಾದ ಹಣವನ್ನು ಕಬ್ರಿಸ್ತಾನ್‍ಗಳಿಗೆ ಬಳಸುವ ಮೂಲಕ ವ್ಯರ್ಥ ಮಾಡಿತ್ತು ಎಂದು ಸಮಾಜವಾದಿ ಪಕ್ಷದ ವಿರುದ್ಧ ಪರೋಕ್ಷವಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಾಗ್ದಾಳಿ ನಡೆಸಿದರು.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹುಟ್ಟೂರಿನ ಗ್ರಾಮ ಬಟೇಶ್ವರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಹಿಂದಿನ ಸರ್ಕಾರ ತನ್ನ ಆಡಳಿತದ ಅವಧಿಯಲ್ಲಿ ಬಡವರಿಗಾಗಿ ಮೀಸಲಾದ ಹಣವನ್ನು ಕಬ್ರಿಸ್ತಾನ್ (ಸ್ಮಶಾನ)ಗಳಿಗೆ ವ್ಯರ್ಥ ಮಾಡಿತ್ತು. ಅಲ್ಲದೇ ಉರ್ದು ಭಾಷೆ ಗೊತ್ತಿಲ್ಲದವರನ್ನು ಉರ್ದು ಭಾಷಾಂತರಕಾರರನ್ನಾಗಿ ಮಾಡಿತು. ಆದರೆ ಸಂಸ್ಕೃತ ಶಾಲೆಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಏನೂ ಮಾಡಿಲ್ಲ ಎಂದು ಹೇಳಿದರು.

best atal bihari vajpayee

ಕಳೆದ ಐದು ವರ್ಷಗಳಿಂದ ಅಧಿಕಾರದಲ್ಲಿ ಇಲ್ಲದಿದ್ದರೂ ಹೊರಗುಳಿದಿದ್ದರೂ 200 ಕೋಟಿ ರೂ. ಖರ್ಚುಮಾಡಿದೆ. ಈ ಹಣ ಎಲ್ಲಿಂದ ಬಂತು? ಅವರು ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಅದನ್ನು ಲೂಟಿ ಮಾಡಿ ಸಂಗ್ರಹಿಸಲಾಗಿದೆ ಎನ್ನಿಸುತ್ತದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಜ.3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ: ಮೋದಿ

Akhilesh Yadav

ಮಾಜಿ ಪ್ರಧಾನಿಯವರ ಜನ್ಮ ವಾರ್ಷಿಕೋತ್ಸವ ಪ್ರಯುಕ್ತ ಬಟೇಶ್ವರದಲ್ಲಿ 230 ಕೋಟಿ ರೂಪಾಯಿ ಯೋಜನೆಗಳ ಶಂಕುಸ್ಥಾಪನೆ ಮಾಡಿದ ಯೋಗಿ ಆದಿತ್ಯನಾಥ್ ಅವರು, ಭಾರತೀಯ ಜನತಾ ಪಕ್ಷದ ಸರ್ಕಾರವು ಸಂಸ್ಕೃತ ಶಾಲೆಗಳ ಬಗ್ಗೆ ಕಾಳಜಿ ವಹಿಸಿದೆ ಎಂದರು ಮತ್ತು ಬಟೇಶ್ವರ ಅಭಿವೃದ್ಧಿಗೊಳಿಸುವ ಬಗ್ಗೆ ಜನರಿಗೆ ಭರವಸೆ ನೀಡಿದರು. ಇದನ್ನೂ ಓದಿ: 15 ರಿಂದ 18 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್ ತುರ್ತು ಬಳಕೆಗೆ ಅನುಮತಿ

bjp flag 3

ಬಿಜೆಪಿ ಸರ್ಕಾರವು ಉತ್ತರ ಪ್ರದೇಶದ ಯುವಕರಿಗೆ ಟ್ಯಾಬ್ಲೆಟ್‍ಗಳು ಮತ್ತು ಸ್ಮಾರ್ಟ್‍ಫೋನ್‍ಗಳನ್ನು ನೀಡುತ್ತಿದೆ. ಇದಲ್ಲದೆ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರಿನಲ್ಲಿ ಹಲವಾರು ಯೋಜನೆಗಳು ಕಾರ್ಯನಿರ್ವಹಿಸುತ್ತಿವೆ. ಅವರ ಹೆಸರಿನಲ್ಲಿ ವೈದ್ಯಕೀಯ ಕಾಲೇಜುಗಳು, ವಸತಿ ಶಾಲೆಗಳು ಮತ್ತು ಮಧ್ಯಂತರ ಶಾಲೆಗಳು ತೆರೆಯುತ್ತಿವೆ ಮತ್ತು ವಸ್ತುಸಂಗ್ರಹಾಲಯ, ಸಾಂಸ್ಕೃತಿಕ ಸಂಕೀರ್ಣ ಮತ್ತು ಉದ್ಯಾನವನವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.

TAGGED:BJP governmentSamajwadi Partyuttar pradeshYogi Adityanathಉತ್ತರ ಪ್ರದೇಶಬಿಜೆಪಿ ಸರ್ಕಾರಯೋಗಿ ಆದಿತ್ಯನಾಥ್ಸಮಾಜವಾದಿ ಪಕ್ಷ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Shreyas Iyer
Cricket

IPL 2026 | ಜಿಟಿ ವಿರುದ್ಧ ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ದಂಡ

Public TV
By Public TV
7 minutes ago
Digital Census India
31 Districts

Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

Public TV
By Public TV
17 minutes ago
ABVP 1 1
Bengaluru City

ಮಹಾರಾಣಿ ವಿವಿಯಲ್ಲಿ ಭಾರೀ ಭ್ರಷ್ಟಾಚಾರ – ವಿದೇಶದಲ್ಲಿ ಪಾಠ ಮಾಡೋ ಉಪನ್ಯಾಸಕರಿಗೆ ವಿವಿಯಿಂದ ಸಂಬಳ: ಎಬಿವಿಪಿ ಆರೋಪ

Public TV
By Public TV
26 minutes ago
wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
1 hour ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
2 hours ago
ABVP Gopi Rangaswamy
Bengaluru City

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?