ಹಾಸನ: ಬೆಲೆ ಏರಿಕೆ ಖಂಡಿಸಿ ಜೆಡಿಎಸ್ ಕಾರ್ಯಕರ್ತರು 500ಕ್ಕೂ ಹೆಚ್ಚು ಸೈಕಲ್‍ಗಳಲ್ಲಿ ರಸ್ತೆಗಿಳಿದು ಆಕ್ರೋಶ ಹೊರಹಾಕಿದ್ದಾರೆ.
Advertisement
ಜೆಡಿಎಸ್ ಮುಖಂಡ ಅಗಿಲೆ ಯೋಗೇಶ್ ನೇತೃತ್ವದಲ್ಲಿ ಸೈಕಲ್ ಏರಿ ರಸ್ತೆಗಿಳಿದ ಜೆಡಿಎಸ್ ಕಾರ್ಯಕರ್ತರು, ಹಾಸನದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಆಕ್ರೋಶ ಹೊರಹಾಕಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನಸಾಮಾನ್ಯರ ಹಿತ ಕಡೆಗಣಿಸಿವೆ. ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ನಿರಂತರವಾಗಿ ಬೆಲೆ ಏರಿಕೆ ಆಗುತ್ತಲೇ ಇದೆ. ಇದರಿಂದ ಜನಸಾಮಾನ್ಯರು ಜೀವನ ನಡೆಸುವುದೇ ಕಷ್ಟವಾಗಿದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ದಸರಾ, ದೀಪಾವಳಿಗೆ ಸೌತ್ ಸೆಂಟ್ರಲ್ ರೈಲ್ವೆಯಿಂದ ಹೆಚ್ಚುವರಿ ರೈಲು ಸೇವೆ
Advertisement
Advertisement
ಜೆಡಿಎಸ್ ಕಾರ್ಯಕರ್ತರ ಸೈಕಲ್ ಪ್ರತಿಭಟನೆಯಿಂದಾಗಿ ಹಾಸನದ ಹಲವೆಡೆ ಸಂಚಾರ ಅಸ್ತವ್ಯಸ್ತವಾಗಿತ್ತು. ಹಾಸನ ನಗರದಾದ್ಯಂತ ಸೈಕಲ್ ಏರಿ ಪ್ರತಿಭಟನೆ ನಡೆಸಿದ ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ, ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಬೆಲೆ ಏರಿಕೆ ವಿರುದ್ಧ ಮನವಿ ಸಲ್ಲಿಸಿದರು.