ನವದೆಹಲಿ: ಗೃಹ ಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಹೆಚ್ಚಳವಾಗಿದೆ. 14.2 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆ 5 ರೂಪಾಯಿ ಹೆಚ್ಚಳವಾಗಿದ್ದು, ನೂತನ ದರ ಇಂದಿನಿಂದ ಜಾರಿಗೆ ಬರಲಿದೆ.
Advertisement
ಇಂದಿನಿಂದ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ 1053 ರೂ. ಆಗಿದ್ದು, 5 ಕೆಜಿಯ ಸಣ್ಣ ದೇಶೀಯ ಸಿಲಿಂಡರ್ ಬೆಲೆಯೂ ಹೆಚ್ಚಾಗಿದೆ. ಇದರ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 18 ರೂ.ಯಷ್ಟು ಹೆಚ್ಚಿಸಲಾಗಿದೆ. ಮತ್ತೊಂದೆಡೆ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 8.50 ರೂ ಇಳಿಕೆಯಾಗಿದೆ. ಇದನ್ನೂ ಓದಿ: ಇಬ್ಬರಲ್ಲ, 20ಕ್ಕೂ ಹೆಚ್ಚು ಮಂದಿಯಿಂದ ಸ್ಕೆಚ್ – ಗುರೂಜಿಗೆ ಬ್ಲ್ಯಾಕ್‌ಮೇಲ್ ಮಾಡಿ ಸುಲಿಗೆಗೆ ಇಳಿದಿದ್ದ ಹಂತಕರು
Advertisement
Advertisement
ಜುಲೈ 1ರಿಂದ 19 ಕೆಜಿ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಸಿಲಿಂಡರ್ಗೆ 198 ರೂಪಾಯಿ ಕಡಿಮೆ ಮಾಡಲಾಯಿತು. ಇದಕ್ಕೂ ಮುನ್ನ ಜೂನ್‍ನಲ್ಲಿ 19 ಕೆಜಿ ವಾಣಿಜ್ಯ ಬಳಕೆ ಎಲ್‍ಪಿಜಿ ಸಿಲಿಂಡರ್‌ಗಳ ಬೆಲೆ ಪ್ರತಿ ಸಿಲಿಂಡರ್ಗೆ 135 ರೂಪಾಯಿ ಇಳಿಕೆಯಾಗಿತ್ತು. ಇದನ್ನೂ ಓದಿ: ರಾಜ್ಯದಲ್ಲಿ ಮಳೆ ಅಬ್ಬರ – ಕೊಡಗು, ಉಡುಪಿ, ಚಿಕ್ಕಮಗಳೂರು ಸೇರಿ 5 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ