ನವದೆಹಲಿ: ಕೇಂದ್ರ ಬಜೆಟ್ ಮಂಡನೆಗೂ ಮುನ್ನವೇ ವಾಣಿಜ್ಯ ಎಲ್‌ಪಿಜಿ (LPG) ಅಡುಗೆ ಅನಿಲ ಬಳಕೆದಾರರಿಗೆ ಸಿಹಿ ಸುದ್ದಿ ಸಿಕ್ಕಿದೆ. ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 91.50 ರೂ. ಇಳಿಕೆ ಮಾಡಲಾಗಿದೆ.
Advertisement
19.2 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವು 91.50 ರೂ. ಇಳಿಸಲಾಗಿದೆ. ದರ ಇಳಿಕೆಯಿಂದಾಗಿ ಎಲ್‌ಪಿಜಿ ಬಳಕೆಯ ಸಿಲಿಂಡರ್ ಬೆಲೆ 1,907ಕ್ಕೆ ಬಂದಿದೆ. ಇದನ್ನೂ ಓದಿ: ಇಂದು ಕೇಂದ್ರ ಬಜೆಟ್ – ಆರ್ಥಿಕತೆಗೆ ಸಿಗುತ್ತಾ ‘ಬೂಸ್ಟರ್ ಡೋಸ್’..?
Advertisement
ಕೆಲ ತಿಂಗಳುಗಳಿಂದ ಎಲ್‌ಪಿಜಿ ದಲ ಏರಿಕೆ ಕಾಣುತ್ತಲೇ ಇತ್ತು. ಇದಕ್ಕೆ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗಿತ್ತು. ಆದರೆ ಪಂಚ ರಾಜ್ಯಗಳ ಚುನಾವಣೆ ಸಮೀಪಿಸಿರುವ ಸಂದರ್ಭದಲ್ಲೇ ವಾಣಿಜ್ಯ ಬಳಕೆಯ ಸಿಲಿಂಡರ್ ದರ ಇಳಿಕೆ ಮಾಡಲಾಗಿದೆ.
Advertisement
Advertisement
ಇದರ ಮಧ್ಯೆ ವಿಮಾನ ಇಂಧನದ ಬೆಲೆಯನ್ನು ಏರಿಕೆ ಮಾಡಲಾಗಿದೆ. ವಿಮಾನದ ಇಂಧನದ ಬೆಲೆಯಲ್ಲಿ ಶೇ.8.5 ಏರಿಕೆಯಾಗಿದೆ. ವಿಮಾನ ಪ್ರಯಾಣಿಕರಿಗೆ ಪ್ರಯಾಣದ ಬಿಸಿ ತಟ್ಟಿದೆ. ಇದನ್ನೂ ಓದಿ: ದೇಶದ 5 ರಾಜ್ಯಗಳಲ್ಲಿ 16 ವಿಮಾನ ನಿಲ್ದಾಣಗಳ ನಿರ್ಮಾಣ: ಜ್ಯೋತಿರಾದಿತ್ಯ ಸಿಂಧಿಯಾ