ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು ಆಗಸ್ಟ್ 1 ರಿಂದ 36 ರೂ. ಕಡಿತಗೊಳಿಸಲಾಗಿದೆ. ರಾಷ್ಟ್ರೀಯ ತೈಲ ಮಾರುಕಟ್ಟೆ ಕಂಪನಿಗಳು(ಒಎಂಎಸ್) 19 ಕೆ.ಜಿ ಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 36 ರೂ.ಗಳಷ್ಟು ಕಡಿಮೆಗೊಳಿಸಿದೆ.
ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆಯಿಂದಾಗಿ ದೆಹಲಿಯಲ್ಲಿ 2,012.50 ರೂ. ಇದ್ದ ಪ್ರತೀ ಸಿಲಿಂಡರ್‌ಗಳ ಬೆಲೆ 1,976.50 ರೂ.ಗೆ ಇಳಿಕೆಯಾಗಿದೆ. ಇದು ಸ್ಥಳೀಯ ಮಾರಾಟ ತೆರಿಗೆಗೆ ಅನುಗುಣವಾಗಿ ರಾಜ್ಯದಿಂದ ರಾಜ್ಯಕ್ಕೆ ಬೆಲೆಯಲ್ಲಿ ವ್ಯತ್ಯಾಸ ಆಗಲಿದೆ. ಇದನ್ನೂ ಓದಿ: ಭಾರತಕ್ಕೆ ಮತ್ತೊಂದು ಚಿನ್ನ ತಂದುಕೊಟ್ಟ ವೈಟ್‍ಲಿಫ್ಟರ್ ‘ಅಚಿಂತಾ ಶೆಯುಲಿ’ – ಮೋದಿಯಿಂದ ಅಭಿನಂದನೆ
Advertisement
Advertisement
ಬೆಂಗಳೂರಿನಲ್ಲಿ 2,100.50 ರೂ. ಇದ್ದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 2,063.50 ರೂ.ಗೆ ಇಳಿಕೆ ಆಗಿದೆ. ಕೋಲ್ಕತ್ತಾದಲ್ಲಿ 2,095.50 ರೂ. ಇದ್ದ ಸಿಲಿಂಡರ್ ಬೆಲೆ 2,132 ರೂ. ಇಳಿಕೆಯಾಗಿದೆ. ಮುಂಬೈನಲ್ಲಿ 1,972.50 ರೂ. ಇದ್ದ ಸಿಲಿಂಡರ್ ಬೆಲೆ 1,936.50 ರೂ. ಆಗಿದೆ. ಚೆನ್ನೈನಲ್ಲಿ 2,177.50 ರೂ. ಇದ್ದ ಸಿಲಿಂಡರ್ ಬೆಲೆ 2,141 ರೂ. ಆಗಿದೆ. ಇದನ್ನೂ ಓದಿ: ಮುಂದಿನ 5 ದಿನ ರಾಜ್ಯದ ಹಲವೆಡೆ ವರ್ಷಧಾರೆ
Advertisement
ಸದ್ಯ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಮಾತ್ರವೇ ಇಳಿಕೆಯಾಗಿದ್ದು, ಗೃಹಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.