ಸಂಜೋತ ಭಂಡಾರಿ ನಿರ್ದೇಶನದ ‘ಲಂಗೋಟಿ ಮ್ಯಾನ್’ (Langoti Man Film) ಚಿತ್ರಕ್ಕೆ ಅಖಿಲ ಕರ್ನಾಟಕ ಅರ್ಚಕರ ಹಾಗೂ ಪುರೋಹಿತರ ಪರಿಷತ್ ತೀವ್ರ ಖಂಡಿಸಿದೆ. ಸಮುದಾಯದ ಕುರಿತು ಅಪಹಾಸ್ಯ ಮಾಡುವುದು ತಪ್ಪು ಎಂದು ಚಿತ್ರತಂಡವನ್ನು ಪುರೋಹಿತರ ಪರಿಷತ್ ಕಾರ್ಯಾಧ್ಯಕ್ಷ ರಾಘವೇಂದ್ರ ಭಟ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ:ಮರ್ಡರ್ ಮಿಸ್ಟ್ರಿ ಸಿನಿಮಾದಲ್ಲಿ ‘ಜಿಂಗೋ’ ಆದ ಡಾಲಿ
Advertisement
ಚಿತ್ರದ ಟೈಟಲ್ ಕುರಿತು ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ ಕಾರ್ಯಾಧ್ಯಕ್ಷ ರಾಘವೇಂದ್ರ ಭಟ್ ಮಾತನಾಡಿ, ಈ ರೀತಿ ಒಂದು ಸಮುದಾಯದ ಕುರಿತು ಅಪಹಾಸ್ಯ ಮಾಡುವುದು ತಪ್ಪು ಎಂದಿದ್ದಾರೆ.
Advertisement
Advertisement
ಈ ಚಿತ್ರವನ್ನು ಬ್ಯಾನ್ (Ban) ಮಾಡದಿದ್ದರೆ ಎಲ್ಲ ಚಿತ್ರಮಂದಿರಗಳಲ್ಲಿ ಪ್ರತಿಭಟನೆ ನಡೆಸುತ್ತೇವೆ. ಲಂಗೋಟಿ, ಜನಿವಾರ ಇವು ಸನಾತನ ಸಂಸ್ಕೃತಿಯ ಪ್ರತೀಕ. ಇದು ಅಪಹಾಸ್ಯ ಮಾಡುವ ವಿಚಾರವಲ್ಲ. ಇತ್ತೀಚೆಗೆ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಎಲ್ಲರ ಶ್ರೇಯೋಭಿವೃದ್ದಿಗೆ ಪೂಜೆ ಮಾಡಿದ್ದಾರೆ. ಇಂದು ನಮ್ಮನ್ನೇ ಅಪಹಾಸ್ಯ ಮಾಡುತ್ತಿದ್ದಾರೆ. ಇದನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದರು.
Advertisement
ಚಿತ್ರ ತಂಡದವರಿಗೆ ಈ ಮೂಲಕ ಎಚ್ಚರಿಕೆ ಕೊಡುತ್ತಿದ್ದೇವೆ. ಒಂದೊಮ್ಮೆ ಇದನ್ನು ಬಿಡುಗಡೆ ಮಾಡಿದರೆ ರಾಜ್ಯಾದ್ಯಂತ ಪ್ರತಿಭಟನೆಗೆ ಅರ್ಚಕರ ಪರಿಷತ್ ನಿರ್ಧರಿಸಿದೆ ಎಂದು ಎಚ್ಚರಿಕೆ ನೀಡಿದರು.