ಡಿಸ್ಪುರ್: ಬಟದ್ರವ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಮುಖ ಆರೋಪಿಯನ್ನು ನಾಗಾಂವ್ ಪೊಲೀಸರು ದರಂಗ್ ಪೊಲೀಸರ ನೆರವಿನೊಂದಿಗೆ ಗುರುವಾರ ತಡರಾತ್ರಿ ಬಂಧಿಸಿದ್ದಾರೆ.
ನಾಗಾವ್ ಜಿಲ್ಲೆಯ ಬಟದ್ರವಾ ಪೊಲೀಸ್ ಕಸ್ಟಡಿಯಲ್ಲಿ ವ್ಯಕ್ತಿಯೊರ್ವ ಸಾವನ್ನಪ್ಪಿದ ಬಳಿಕ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲಾಗಿತ್ತು. ಘಟನೆ ನಂತರ ಆರೋಪಿಯು ಬಟದ್ರವದಿಂದ ಪರಾರಿಯಾಗಿ ತಲೆಮರೆಸಿಕೊಂಡಿದ್ದನು. ಆದರೆ ಸಿಸಿಟಿವಿ ದೃಶ್ಯದಲ್ಲಿ ಆರೋಪಿ ಕೃತ್ಯ ಸೆರೆಯಾಗಿತ್ತು. ಇದೀಗ ಈ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಾಗಿ ನಾಗಾಂವ್ ಪೊಲೀಸರ ತಂಡವು ಧುಲಾ ಪೊಲೀಸ್ ಠಾಣೆಯ ಸಿಬ್ಬಂದಿ ಸಹಾಯದಿಂದ ಶೋಧವನ್ನು ಆರಂಭಿಸಿತು. ಈ ವಿಚಾರ ತಿಳಿದು ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯನ್ನು ಬೆನ್ನಟ್ಟಿದ ಪೊಲೀಸರು ಕೊನೆಗೆ ಅಸ್ಸಾಂನ ದರಂಗ್ ಜಿಲ್ಲೆಯ ಧುಲಾ ಪೊಲೀಸ್ ಠಾಣೆ ವ್ಯಾಪ್ತಿಯ ಮೌಸಿದಾ ಪ್ರದೇಶದಲ್ಲಿ ಆರೋಪಿಯನ್ನು ಹಿಡಿದಿದ್ದಾರೆ. ಇದನ್ನೂ ಓದಿ: ವೇಶ್ಯಾವಾಟಿಕೆ ಅಕ್ರಮವಲ್ಲ – ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ಆರೋಪಿಯನ್ನು ಅಲ್ಲಾವುದ್ದೀನ್ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಡ್ರಗ್ಸ್ ದಂಧೆ ಮತ್ತು ಹಲವಾರು ದರೋಡೆ ಪ್ರಕರಣಗಳು ದಾಖಲಾಗಿದೆ. ಇದೀಗ ಬಂಧಿತ ಆರೋಪಿತಯನ್ನು ಧುಲಾ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಶುಕ್ರವಾರ ಆತನನ್ನು ನಾಗಾನ್‍ಗೆ ಸ್ಥಳಾಂತರಿಸಲಾಗಿದೆ. ಇದನ್ನೂ ಓದಿ: ಮೋದಿ ಪ್ರಧಾನಿಯಾಗಿ 8 ವರ್ಷ – ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇಗೆ ಚಾಲನೆ
ಮೇ 21 ರಂದು ಗುಂಪೊಂದು ಬಟಾದ್ರವ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿ, ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿತು. ಅಲ್ಲದೇ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ಧ್ವಂಸಗೊಳಿಸಿದ್ದರು. ಘಟನೆ ವೇಳೆ ಮೂವರು ಪೊಲೀಸರು ಗಾಯಗೊಂಡಿದ್ದರು.