ಪ್ರಧಾನಿ ಪರಮಾತ್ಮನಲ್ಲ, ಮೋದಿ ದೇವರಲ್ಲ, ಸದನಕ್ಕೆ ಬಂದು ಮಾತನಾಡಲಿ: ಖರ್ಗೆ ಕೆಂಡ

Public TV
1 Min Read
Mallikarjun Kharge Narendra Modi

ನವದೆಹಲಿ: ರಾಜ್ಯಸಭೆಗೆ ಪ್ರಧಾನಮಂತ್ರಿ ಬಂದು ಉತ್ತರ ಕೊಡಲಿ, ಮಣಿಪುರದ ಹಿಂಸಾಚಾರದ (Manipur Violence) ಬಗ್ಗೆ ಮಾತನಾಡಲಿ, ಪ್ರಧಾನಮಂತ್ರಿ ರಾಜ್ಯಸಭೆಗೆ ಬಂದರೆ ಏನಾಗಲಿದೆ? ಮೋದಿ ಏನು ಪರಮಾತ್ಮನೇ? ಅವರೇನು ದೇವರಲ್ಲ. ರಾಜ್ಯಸಭೆಗೆ ಬಂದು ಉತ್ತರ ಕೊಡಲಿ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಕಿಡಿಕಾರಿದ್ದಾರೆ.

ರಾಜ್ಯಸಭೆಯಲ್ಲಿ ಮಣಿಪುರ ಜನಾಂಗೀಯ ಸಂಘರ್ಷ ಬಗ್ಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಬಂದು ಈ ಬಗ್ಗೆ ಮಾತನಾಡಬೇಕು ಎಂದರು. ಆಡಳಿತ ಪಕ್ಷದ ಸದಸ್ಯರು ನಿಯಮ 167 ರ ಅಡಿಯಲ್ಲಿ ಚರ್ಚೆ ಮಾಡಲು ಒಪ್ಪಿಕೊಂಡಿದ್ದರು. ಸನದಕ್ಕೆ ಬರುತ್ತಿದ್ದಂತೆ ತಮ್ಮ ನಿಲುವು ಬದಲಾಯಿಸಿದ್ದಾರೆ.

Mallikarjun Kharge 1 2

ಮಣಿಪುರ ಬಗ್ಗೆ ಚರ್ಚೆ ಮಾಡದಿರುವುದು ಯಾಕೆ? ಈ ಬಗ್ಗೆ ಸುದೀರ್ಘ ಚರ್ಚೆ ನಡೆಯಲಿ. ಪ್ರಧಾನಮಂತ್ರಿಯೂ ಬಂದು ಮಾತನಾಡಲಿ ಎಂದು ಹೇಳಿದರು. ಇದಕ್ಕೆ ಆಡಳಿತ ಪಕ್ಷದ ನಾಯಕರು ಗದ್ದಲ ಮಾಡಿದರು. ಇದರಿಂದ ಆಕ್ರೋಶಗೊಂಡ ಖರ್ಗೆ, ಪ್ರಧಾನಿ ಏನು ದೇವರಲ್ಲ, ಸದನಕ್ಕೆ ಬಂದು ಮಾತನಾಡಲಿ ಎಂದು ಕಟು ಶಬ್ದಗಳಲ್ಲಿ ಟೀಕಿಸಿದರು. ಖರ್ಗೆ ಮಾತಿಗೆ ಸದನದಲ್ಲಿ ಹೆಚ್ಚಿದ ಗದ್ದಲ, ಕಲಾಪ ಮುಂದೂಡಿಕೆ ಮಾಡಲಾಯಿತು. ಇದನ್ನೂ ಓದಿ: ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ ಸಮಿತಿಯಿಂದ CJI ಹೊರಗೆ – ರಾಜ್ಯಸಭೆಯಲ್ಲಿ ಮಸೂದೆ ಮಂಡನೆ

ತಮ್ಮ ಸರ್ಕಾರ ವಿರುದ್ಧ ಸಲ್ಲಿಸಿರುವ ಅವಿಶ್ವಾಸ ನಿರ್ಣಯದ ಮೇಲೆ ಇಂದು ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಸಂಜೆ 4 ಗಂಟೆಗೆ ಲೋಕಸಭೆಯಲ್ಲಿ ಅವರು ಸುದೀರ್ಘ ಭಾಷಣ ಮಾಡಲಿದ್ದು ಅದಕ್ಕೂ ಮುನ್ನ ರಾಜ್ಯಸಭೆಗೂ ಬಂದು ಮಾತನಾಡಲು ಖರ್ಗೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ದೆಹಲಿಯ ಕೆಂಪು ಕೋಟೆ, ರಾಜ್‍ಘಾಟ್‍ನಲ್ಲಿ ಸೆಕ್ಷನ್ 144 ಜಾರಿ

Web Stories

Share This Article