ವಿಜಯಪುರ: ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಸಾಲ ಮನ್ನಾ ಮಾಡುವ ಬಗ್ಗೆ ಯಡಿಯೂರಪ್ಪ ಅವರಿಗೆ ಈಗ ಜ್ಞಾನೋದಯವಾಗಿದೆ. ಹಾಗಾಗಿ ಈಗ ಟ್ವೀಟ್ ಮಾಡಿ ಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಯಡ್ಡಿಯೂರಪ್ಪ ವಿರುದ್ಧ ಹರಿಹಾಯ್ದಿದ್ದಾರೆ.
ನಗರದ ಜೆಡಿಎಸ್ ಅಭ್ಯರ್ಥಿ ಎಸ್.ಕೆ ಬೆಳ್ಳುಬ್ಬಿ ಪರ ಮತಯಾಚನೆ ಮಾಡುವ ಹಿನ್ನೆಲೆಯಲ್ಲಿ ನಗರದ ದರಬಾರ್ ಮೈದಾನದಲ್ಲಿ ಬೃಹತ್ ಜೆಡಿಎಸ್ ಕಾರ್ಯಕರ್ತರ ಸಮಾವೇಶವನ್ನ ಆಯೋಜಿಸಲಾಗಿತ್ತು. ಗಿಡಕ್ಕೆ ನೀರು ಹಾಕುವ ಮುಖಾಂತರ ಕುಮಾರಸ್ವಾಮಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. ಇದನ್ನೂ ಓದಿ: ಕೃಷ್ಣನೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೆ `ನಮೋ’- ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಸುಳಿವು ಕೊಟ್ರಾ ಪ್ರಧಾನಿ?
Advertisement
ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಎಚ್‍ಡಿಕೆ, ರಿಸರ್ವ್ ಬ್ಯಾಂಕ್ ನವರು ನೋಟ್ ಪ್ರಿಂಟ್ ಮಾಡುವ ಮಷೀನ್ ನೀಡಿಲ್ಲ. ಹಾಗಾಗಿ ಸಾಲ ಮನ್ನಾ ಮಾಡಲು ಆಗಲ್ಲ ಎಂದು ಯಡಿಯೂರಪ್ಪ ಮೊದಲು ಹೇಳಿದ್ದರು. ಚುನಾವಣೆ ಬಂದಾಕ್ಷಣ ಯಡಿಯೂರಪ್ಪ ಅವರಿಗೆ ರೈತರ ಮೇಲೆ ಕನಿಕರ ಬಂತಾ ಎಂದು ಪ್ರಶ್ನಿಸಿದ್ದಾರೆ. ರೈತರ ಸಾಲ ಮನ್ನಾ ವಿಚಾರ ಪ್ರಸ್ತಾಪ ಮಾಡದೇ ಹೋದರೆ ರೈತರು ಮತ ಹಾಕಲ್ಲ ಎಂದು ಈಗ ಸಾಲ ಮನ್ನಾ ಬಗ್ಗೆ ಮಾತಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ಸವಾಲಿನಂತೆ ರಾಜೀನಾಮೆ ಕೊಟ್ಟರೂ ಮೋದಿ ಸ್ವೀಕರಿಸದೇ ವಿನಂತಿಸಿಕೊಂಡ್ರು: ಅಂದಿನ ಘಟನೆಯನ್ನು ನೆನಪಿಸಿಕೊಂಡ ಎಚ್‍ಡಿಡಿ
Advertisement
Advertisement
ದೇವೇಗೌಡರ ಬಗ್ಗೆ ಅನುಕಂಪದ ಮಾತಾಡಿದ ಮೋದಿ ಕುರಿತು ಪ್ರತಿಕ್ರಿಯಿಸಿದ ಅವರು, 2014 ರ ಲೋಕಸಭಾ ಚುನಾವಣೆ ವೇಳೆ ದೇವೇಗೌಡರನ್ನು ವೃದ್ಧಾಶ್ರಮಕ್ಕೆ ಕಳಿಸುತ್ತೇನೆಂದು ಯಾಕೆ ಹೇಳಿದ್ರು ಎಂದು ಪ್ರಶ್ನಿಸಿದ್ದಾರೆ. ಈಗೇಕೆ ದೇವೇಗೌಡರ ಬಗ್ಗೆ ಅನುಕಂಪ ಬಂತು. ರಾಜ್ಯದ ಜನತೆ ಈಗಾಗಲೇ ಎರಡೂ ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕಾರ ಮಾಡಿದ್ದಾರೆ ಎಂದು ಹೇಳಿದ್ದಾರೆ.
Advertisement
ಮೋದಿ ಅವರು ಬಿಟ್ಟಿರುವಂತ ಪದ ಪುಂಜಗಳು ಎಲ್ಲರಲ್ಲಿ ಗೊಂದಲ ಸೃಷ್ಟಿಸಿದೆ. ಮೋದಿ ಅವರು ನನಗೆ ಬಾಲ್ ಹಾಕೋಕೆ ಆಗಲ್ಲ ಎಂದು ಟಾಂಗ್ ನೀಡಿದ್ದಾರೆ.