ಬೆಂಗಳೂರು: ಸಿದ್ದಗಂಗಾ ಮಠದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾಷಣವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯನವರು ಸಿದ್ದಗಂಗಾ ಪವಿತ್ರ ನೆಲ ನಿಮ್ಮನ್ನು ಕ್ಷಮಿಸದು ಎಂದು ಕಿಡಿಕಾರಿದ್ದಾರೆ.
ಟ್ವೀಟ್ ನಲ್ಲಿ ಏನಿದೆ?
ತುಮಕೂರಿನ ಸಿದ್ದಗಂಗಾ ಮಠಕ್ಕೆ ಜಾತ್ಯತೀತ ಮತ್ತು ಪಕ್ಷಾತೀತವಾದ ಗೌರವದ ಸ್ಥಾನ ಇದೆ. ಈ ಕಾರಣಕ್ಕಾಗಿಯೇ ಅದು ಸರ್ವರೂ ಭಕ್ತಿಯಿಂದ ನಮಿಸುವ ಕ್ಷೇತ್ರ. ಇಂತಹ ಕ್ಷೇತ್ರದಲ್ಲಿ ಎಳೆಯ ಮಕ್ಕಳನ್ನು ಕೂರಿಸಿಕೊಂಡು ಕೊಳಕು ರಾಜಕೀಯದ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರೇ ನಿಮ್ಮನ್ನು ಆ ಪವಿತ್ರ ನೆಲ ಕ್ಷಮಿಸದು ಎಂದು ಸಿದ್ದರಾಮಯ್ಯನವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ತುಮಕೂರಿನಲ್ಲಿ ಸಂತರ ಮುಂದೆ ಮೂರು ಸಂಕಲ್ಪವಿಟ್ಟ ಮೋದಿ
Advertisement
ತುಮಕೂರಿನ ಸಿದ್ದಗಂಗಾ ಮಠಕ್ಕೆ ಜಾತ್ಯತೀತ ಮತ್ತು ಪಕ್ಷಾತೀತವಾದ ಗೌರವದ ಸ್ಥಾನ ಇದೆ.
ಈ ಕಾರಣಕ್ಕಾಗಿಯೇ ಅದು ಸರ್ವರೂ ಭಕ್ತಿಯಿಂದ ನಮಿಸುವ ಕ್ಷೇತ್ರ.
ಇಂತಹ ಕ್ಷೇತ್ರದಲ್ಲಿ ಎಳೆಯ ಮಕ್ಕಳನ್ನು ಕೂರಿಸಿಕೊಂಡು ಕೊಳಕು ರಾಜಕೀಯದ ಭಾಷಣ ಮಾಡಿದ @narendramodi ಅವರೇ, ನಿಮ್ಮನ್ನು ಆ ಪವಿತ್ರ ನೆಲ ಕ್ಷಮಿಸದು.
— Siddaramaiah (@siddaramaiah) January 2, 2020
Advertisement
ಪ್ರಧಾನಿಗಳು ಆಗಮನಕ್ಕೂ ಮುನ್ನ ಸಾಲು ಸಾಲು ಟ್ವೀಟ್ ಮಾಡಿದ್ದ ಸಿದ್ದರಾಮಯ್ಯನವರು ಉತ್ತರ ಕೊಡಿ ಮೋದಿ ಎಂದು ಕೇಳಿದ್ದರು. ಇದೀಗ ಭಾಷಣದ ಬೆನ್ನಲ್ಲೇ ಮಕ್ಕಳ ಮುಂದೆ ರಾಜಕೀಯದ ಮಾತು ಬೇಕಾಗಿರಲಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸಾಲು ಸಾಲು ಪ್ರಶ್ನೆ
Advertisement
ತುಮಕೂರಿನಲ್ಲಿ ಸಂತರ ಮುಂದೆ ಮೂರು ಸಂಕಲ್ಪವಿಟ್ಟ ಮೋದಿ
– ಸಿಎಎ ಪರ ಮೋದಿ ಮಾತು
– ಪಾಕಿಸ್ತಾನದ ವಿರುದ್ಧ ಮಾತನಾಡಲ್ಲ ಯಾಕೆ?https://t.co/JpBoUnBFYc#Tumakuru #PMModi #SiddagangaMutt #CAA @PMOIndia @narendramodi @BJP4Karnataka @BSYBJP @nalinkateel @JoshiPralhad
— PublicTV (@publictvnews) January 2, 2020