ಕನ್ಯಾಕುಮಾರಿ ತಲುಪಿದ ಪ್ರಧಾನಿ ನರೇಂದ್ರ ಮೋದಿ

Public TV
1 Min Read
NARENDRA MODI 3

ಚೆನ್ನೈ: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಇಂದು ಕನ್ಯಾಕುಮಾರಿಗೆ (Kanniyakumari) ಬಂದಿಳಿದಿದ್ದಾರೆ.

ಇಂದು ಸಂಜೆಯಿಂದ ಜೂನ್ 1 ರ ಸಂಜೆಯವರೆಗೆ ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿಯೇ ಧ್ಯಾನ ಮಂಟಪದಲ್ಲಿ ಪ್ರಧಾನಿಯವರು ಹಗಲು-ರಾತ್ರಿ ಧ್ಯಾನ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಹೆಲಿಕಾಪ್ಟರ್ ಮೂಲಕ ಕನ್ಯಾಕುಮಾರಿಗೆ ಮೋದಿ ಆಮಿಸಿದ್ದಾರೆ.

ಈಗಾಗಲೇ ತಿರುನಲ್ವೇಲಿ ಡಿಐಜಿಗೆ ಭದ್ರತೆಯ ಉಸ್ತುವಾರಿ ನೀಡಲಾಗಿದೆ. ಈ ಸ್ಥಳದ ಭದ್ರತೆಗೆ 2000 ಪೊಲೀಸರನ್ನು ನಿಯೋಜಿಸಲಾಗಿದೆ. ಮೋದಿಯವರು ಧ್ಯಾನ ಮಾಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಅಂದರೆ 2019ರಲ್ಲಿ ಲೋಕಸಭಾ ಚುನಾವಣೆ ಮುಗಿದ ಬಳಿಕ ಮೋದಿ ಕೇದಾರನಾಥದಲ್ಲಿ ಧ್ಯಾನ ಮಾಡಿದ್ದರು.

1892ರ ಡಿಸೆಂಬರ್ 23, 24, 25 ಸ್ವಾಮಿ ವಿವೇಕಾನಂದರು ಇದೇ ಜಾಗದಲ್ಲಿ ಧ್ಯಾನಕ್ಕೆ ಕೂತಿದ್ದರು. ಈ ಕಾರಣಕ್ಕೆ 1970ರಲ್ಲಿ ಇದೇ ಜಾಗದಲ್ಲಿ ಸ್ಮಾರಕವನ್ನು ನಿರ್ಮಾಣ ಮಾಡಲಾಗಿತ್ತು. ಇದನ್ನೂ ಓದಿ: ಕನ್ಯಾಕುಮಾರಿಯಲ್ಲಿ ಪ್ರಧಾನಿ ಮೋದಿ ಧ್ಯಾನ; 33 ವರ್ಷಗಳ ಹಿಂದಿನ ಫೋಟೊ ವೈರಲ್‌

Share This Article