ಬೆಂಗಳೂರು: ರಾಜ್ಯದ ನಾಯಕರು ಪಾಲಿಸದೇ ಇದ್ದರೆ ಪ್ರಧಾನಿ ಮೋದಿ ಸಂಚಾರಿ ನಿಯಮವನ್ನು ಚಾಚೂ ತಪ್ಪದೇ ಪಾಲಿಸುತ್ತಾರೆ. ಅಪ್ಪಿತಪ್ಪಿಯೂ ಸಹ ಸೀಟ್ ಬೆಲ್ಟ್ ಧರಿಸುವುದನ್ನು ಮರೆಯುವುದಿಲ್ಲ. ಆದರೆ, ರಾಜ್ಯದಲ್ಲಿ ಮುಖ್ಯಮಂತ್ರಿ, ಗೃಹ ಸಚಿವರು ಸೇರಿ ಬಹುತೇಕರು ಸೀಟ್ ಬೆಲ್ಟ್ ಧರಿಸುವುದೇ ಇಲ್ಲ.
ಜನಸಾಮಾನ್ಯರು ಸಂಚಾರಿ ನಿಯಮ ಪಾಲಿಸುತ್ತಿಲ್ಲ ಎಂದು ಸಾವಿರಾರು ರೂ.ಗೆ ಕೇಂದ್ರ ಸರ್ಕಾರ ದಂಡ ಹೆಚ್ಚಿಸಿದೆ. ಆದರೆ, ಸಂಚಾರಿ ನಿಯಮ ಪಾಲಿಸಿ ಇತರರಿಗೆ ಮಾದರಿಯಾಗಬೇಕಿದ್ದ ಜನಪ್ರತಿನಿಧಿಗಳೇ ನಿರ್ಲಕ್ಷ್ಯ ವಹಿಸಿದ್ದು, ಕನಿಷ್ಟ ಸೀಟ್ ಬೆಲ್ಟ್ ಸಹ ಹಾಕದೆ ವಾಹನದಲ್ಲಿ ಪ್ರಯಾಣಿಸುತ್ತಿದ್ದಾರೆ ಎಂಬುದು ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್ ವೇಳೆ ಬಹಿರಂಗವಾಗಿದೆ.
Advertisement
Advertisement
ಮುಖ್ಯಮಂತ್ರಿ ಯಡಿಯೂರಪ್ಪನವರು ಪ್ರತಿ ದಿನ ಇದೇ ರೀತಿ ರೂಲ್ಸ್ ಬ್ರೇಕ್ ಮಾಡುತ್ತಾರೆ. ಪಬ್ಲಿಕ್ ಟಿವಿ ನಡೆಸಿದ ರಿಯಾಲಿಟಿ ಚೆಕ್ ವೇಳೆ ಇದು ಬಹಿರಂಗವಾಗಿದ್ದು, ಸೆಪ್ಟೆಂಬರ್ 4ರಂದು ಸೆರೆ ಹಿಡಿದಿದ್ದ ದೃಶ್ಯದಲ್ಲಿಯೂ ಸಹ ಬಿಎಸ್‍ವೈ ಸೀಟ್ ಬೆಲ್ಟ್ ಧರಿಸಿರಲಿಲ್ಲ. ನಿನ್ನೆಯ ದೃಶ್ಯದಲ್ಲಿಯೂ ಸಹ ಯಡಿಯೂರಪ್ಪ ಸೀಟ್ ಬೆಲ್ಟ್ ಧರಿಸಿರಲಿಲ್ಲ. ಕಾರ್ಯನಿಮಿತ್ತ ತಮ್ಮ ನಿವಾಸ ಧವಳಗಿರಿಯಿಂದ ಕಾರಲ್ಲಿ ಹೊರಟಾಗ ಯಥಾ ಪ್ರಕಾರ ಸೀಟ್ ಬೆಲ್ಟ್ ಹಾಕಿಕೊಳ್ಳದೇ ಪ್ರಯಾಣಿಸಿದರೂ ಪೊಲೀಸರು ಈ ಬಗ್ಗೆ ಗಮನವೇ ಹರಿಸಲಿಲ್ಲ.
Advertisement
ದೇಶದ ಪ್ರಧಾನಿ ನರೇಂದ್ರ ಮೋದಿ ಅಚ್ಚುಕಟ್ಟಾಗಿ ಸಂಚಾರಿ ನಿಯಮ ಪಾಲಿಸುತ್ತಾರೆ. ಕಾರಿನಲ್ಲಿ ಕುಳಿತ ತಕ್ಷಣ ಮೋದಿ ಸೀಟ್ ಬೆಲ್ಟ್ ಹಾಕಿಕೊಳ್ತಾರೆ. ತಾನು ಪ್ರಧಾನಿ, ದೇಶವನ್ನು ಆಳುವವನು ಅಂತಾ ಮೋದಿ ಎಲ್ಲೂ ರೂಲ್ಸ್ ಬ್ರೇಕ್ ಮಾಡುವುದಿಲ್ಲ. ಆದರೆ, ಮುಖ್ಯಮಂತ್ರಿ ಯಡಿಯೂರಪ್ಪನವರು ಮಾತ್ರ ನಾನು ರಾಜ್ಯದ ಸಿಎಂ ನಾನೇಕೆ ಸಂಚಾರಿ ನಿಯಮ ಪಾಲಿಸಬೇಕು ಎಂಬ ಧೋರಣೆಯನ್ನು ಅನುಸರಿಸುತ್ತಿದ್ದಾರೆ.