ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ನಾಳೆಯಿಂದ ಸೇವೆ ಮತ್ತು ಸಮರ್ಪಣಾ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಹೇಳಿದರು.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಸೆ.17ರಿಂದ ಅ.7ರ ವರೆಗೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ ನಾಳೆ ಒಂದೇ ದಿನ 30ಲಕ್ಷ ಜನರಿಗೆ ಲಸಿಕೆ ಹಾಕಿಸುವ ಸಂಕಲ್ಪ ಮಾಡಲಾಗಿದೆ ಎಂದರು. ಇದನ್ನೂ ಓದಿ: ನಾಯಿ ಹಿಡಿಯಲು ಹೋಗಿ ಬೋನಿನಲ್ಲಿ ಲಾಕ್ ಆಯ್ತು ಚಿರತೆ!
ಆರೋಗ್ಯ ತಪಾಸಣೆ, ಅಂಗವಿಕಲರಿಗೆ ಲಸಿಕೆ ನೀಡುವುದೇ ಸೇವೆ ಮತ್ತು ಸಮರ್ಪಣಾ ಅಭಿಯಾನದ ಯೋಜನೆಯಾಗಿದೆ. ಈ 20 ದಿನಗಳ ಕಾಲ ಬಿಜೆಪಿ ಯುವ ಮೋರ್ಚಾದಿಂದ ಬೃಹತ್ ರಕ್ತದಾನ ಶಿಬಿರ ಆಯೋಜನೆ ಮಾಡಲಾಗಿದೆ. ಅಲ್ಲದೇ ಕರ್ನಾಟಕದ ಕಾವೇರಿ, ಮಲಪ್ರಭಾ, ಕೃಷ್ಣಾ ನದಿ ಸೇರಿ ಭಾರತದ ಎಲ್ಲ 71 ನದಿಗಳ ಸ್ವಚ್ಛತಾ ಕಾರ್ಯ ನಡೆಯಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ: ಜೊಲ್ಲೆ