ನವದೆಹಲಿ: ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳನ್ನು ಬಳಸಬೇಕು. ಇದು ನ್ಯಾಯಾಂಗ ವ್ಯವಸ್ಥೆ ಮೇಲೆ ಸಾಮಾನ್ಯ ನಾಗರಿಕರಲ್ಲಿ ವಿಶ್ವಾಸ ಹೆಚ್ಚಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಆಶಯ ವ್ಯಕ್ತಪಡಿಸಿದ್ದಾರೆ.
ಜೈಲುಗಳಲ್ಲೇ ಕೊಳೆಯುತ್ತಿರುವ ವಿಚಾರಣಾಧೀನ ಕೈದಿಗಳಿಗೆ ಸಂಬಂಧಿಸಿದ ಪ್ರಕರಣಗಳಿಗೆ ಆದ್ಯತೆ ನೀಡಿ ಕಾನೂನು ಪ್ರಕಾರ, ಮಾನವ ಸಂವೇದನೆಯ ಆಧಾರದ ಮೇಲೆ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಿಗೆ ಮೋದಿ ಮನವಿ ಮಾಡಿದರು. ನ್ಯಾಯಾಂಗ ಸುಧಾರಣೆ ಕೇವಲ ನೀತಿ ವಿಷಯವಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಿಮಗೆ ಹಿಂದಿ ಬರದಿದ್ದರೆ ದೇಶ ಬಿಟ್ಟು ತೊಲಗಿ: ಯುಪಿ ಸಚಿವ
Advertisement
Advertisement
ಪ್ರತಿ ಜಿಲ್ಲೆಯಲ್ಲೂ ಜಿಲ್ಲಾ ನ್ಯಾಯಾಧೀಶರ ನೇತೃತ್ವದ ಸಮಿತಿಯಿದ್ದು, ಈ ಪ್ರಕರಣಗಳನ್ನು ಪರಿಶೀಲಿಸಬಹುದು. ಸಾಧ್ಯವಾದಲ್ಲೆಲ್ಲ ಅಂತಹ ಕೈದಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬಹುದು ಎಂದು ಹೇಳಿದ್ದಾರೆ.
Advertisement
“2015 ರಲ್ಲಿ, ನಾವು ಅಪ್ರಸ್ತುತವಾದ ಸುಮಾರು 1,800 ಕಾನೂನುಗಳನ್ನು ಗುರುತಿಸಿದ್ದೇವೆ. ಇವುಗಳಲ್ಲಿ ಕೇಂದ್ರಕ್ಕೆ ಸಂಬಂಧಿಸಿದ 1,450 ಕಾನೂನುಗಳನ್ನು ರದ್ದುಗೊಳಿಸಲಾಗಿದೆ. ಅಂತಹ 75 ಕಾನೂನುಗಳನ್ನು ಮಾತ್ರ ರಾಜ್ಯಗಳು ರದ್ದುಪಡಿಸಿವೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ವಿದ್ಯುತ್ ಸಮಸ್ಯೆಗೆ ಮೋದಿ ಸರ್ಕಾರವನ್ನು ದೂಷಿಸಲು ಸಾಧ್ಯವಿಲ್ಲ: ಚಿದಂಬರಂ ವ್ಯಂಗ್ಯ
Advertisement
ನಮ್ಮ ದೇಶದಲ್ಲಿ, ನ್ಯಾಯಾಂಗದ ಪಾತ್ರವು ಸಂವಿಧಾನದ ರಕ್ಷಕನದ್ದಾಗಿದೆ. ಶಾಸಕಾಂಗವು ನಾಗರಿಕರ ಆಶಯಗಳನ್ನು ಪ್ರತಿನಿಧಿಸುತ್ತದೆ. ಇವೆರಡರ ಸಂಗಮವು ದೇಶದಲ್ಲಿ ಪರಿಣಾಮಕಾರಿ ಎಂದು ಅಭಿಪ್ರಾಯಪಟ್ಟಿದ್ದಾರೆ.