ಹಾಸನ: ಪ್ರಧಾನಿ ಮೋದಿಯವರು ದೆಹಲಿಗೆ ಬಂದು ಎಲ್ಲ ವಿಷಯಗಳ ಬಗ್ಗೆ ಚರ್ಚಿಸಿ ಎಂದಿದ್ದಾರೆ. ನಾಲ್ಕೈದು ದಿನಗಳಲ್ಲಿ ದೆಹಲಿಗೆ ತೆರಳಿ ನೆರೆ ಪರಿಹಾರ ಹಾಗೂ ಮಂತ್ರಿ ಮಂಡಲದ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಜಿಲ್ಲೆಯ ಬೇಲೂರು ತಾಲೂಕಿನ ಹಳೇಬೀಡಿನ ಪುಷ್ಪಗಿರಿ ಉತ್ಸವದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ಪ್ರಧಾನಿ ರಾಜ್ಯಕ್ಕೆ ಭೇಟಿ ನೀಡಿದ ವೇಳೆ ನಮ್ಮ ಸಮಸ್ಯೆಯನ್ನು ಅವರ ಗಮನಕ್ಕೆ ತಂದಿದ್ದೇವೆ. ನಾಲ್ಕೈದು ದಿನದಲ್ಲಿ ದೆಹಲಿಗೆ ತೆರಳಿ ಚರ್ಚಿಸಲಾಗುವುದು. ಮುಂದಿನ ವಾರದಿಂದ ಬಜೆಟ್ ಸಿದ್ಧತೆ ಮಾಡಲಾಗುವುದು. ರಾಜ್ಯದ ರೈತರ ಹಿತ ಕಾಪಾಡುವ ದೃಷ್ಟಿಯಿಂದ ರೈತರನ್ನು ಕಣ್ಮುಂದೆ ಇಟ್ಟುಕೊಂಡು ನೀರಾವರಿಗೆ ಹೆಚ್ಚಿನ ಆದ್ಯತೆಯ ಬಜೆಟ್ ಮಂಡನೆಗೆ ಯತ್ನಿಸುತ್ತೇನೆ ಎಂದರು.
Advertisement
Advertisement
ಅಲ್ಲದೆ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲು ತೀರ್ಮಾನಿಸಲಾಗಿದೆ. ಬಜೆಟ್‍ನಲ್ಲಿ ಹೊಸ ಘೋಷಣೆ ಹಾಗೂ ಯೋಜನೆ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ. ಆದರೆ ರೈತರ ಉತ್ಪನ್ನಗಳಿಗೆ ಉತ್ತೇಜನ ಹಾಗೂ ಉತ್ತಮ ಸೌಲಭ್ಯ ಸಿಗಬೇಕು. ಮುಂದಿನ ಎರಡ್ಮೂರು ದಿನದಲ್ಲಿ ಎಲ್ಲ ಇಲಾಖೆಗಳ ಪರಿಶೀಲನೆ ನಂತರ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.
Advertisement
ವಾಲ್ಮೀಕಿ ಸಮುದಾಯಕ್ಕೆ ಡಿಸಿಎಂ ನೀಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸ್ವಾಮೀಜಿ ಹಾಗೂ ಶಾಸಕರ ಜೊತೆ ಚರ್ಚಿಸುತ್ತೇನೆ ಎಂದು ತಿಳಿಸಿದರು.