ತಿರುವನಂತಪುರಂ: ಕೇರಳದ (Kerala) ಪಾಲಕ್ಕಾಡ್ (Palakkad) ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ (NrendraModi) ಅವರು ಸಂತಾಪ ಸೂಚಿಸಿದ್ದಾರೆ. ಜೊತೆಗೆ ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.
PM @narendramodi has expressed grief on the loss of lives due to an accident in Kerala’s Palakkad district. He extends condolences to the bereaved families and prays for a quick recovery of the injured.
— PMO India (@PMOIndia) October 6, 2022
Advertisement
ಈ ಸಂಬಂಧ ಟ್ವೀಟ್ ಮಾಡಿರುವ ನರೇಂದ್ರ ಮೋದಿ ಅವರು, ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‍ಆರ್‌ಎಫ್)ನಿಂದ ಮೃತರ ಕುಟುಂಬಸ್ಥರಿಗೆ 2 ಲಕ್ಷ ರೂ.ಗಳನ್ನು ಮತ್ತು ಗಾಯಾಳುಗಳಿಗೆ ರೂ. 50,000 ರೂ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೆಎಸ್‍ಆರ್‌ಟಿಸಿಗೆ ಶಾಲಾ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಟೂರಿಸ್ಟ್ ಬಸ್ ಡಿಕ್ಕಿ – 9 ಮಂದಿ ಸಾವು, 40 ಜನರಿಗೆ ಗಾಯ
Advertisement
Rs. 2 lakh from PMNRF would be given to the next of kin of each deceased. The injured would be given Rs. 50,000.
— PMO India (@PMOIndia) October 6, 2022
Advertisement
ಶಾಲೆಯ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೂರಿಸ್ಟ್ ಬಸ್, ಕೆಎಸ್‍ಆರ್‌ಟಿಸಿ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, 40 ಮಂದಿ ಗಾಯಗೊಂಡಿರುವ ಘಟನೆ ವಡಕ್ಕೆಂಚೇರಿಯಲ್ಲಿ ನಡೆದಿದೆ. ಇದನ್ನೂ ಓದಿ: ನ. 1 ರಿಂದ ಜೆಡಿಎಸ್ ಜನತಾ ಪಂಚರತ್ನ ಯಾತ್ರೆ ಆರಂಭ – ಪಕ್ಷ ಸಂಘಟನೆಗೆ ಒತ್ತು: ಹೆಚ್‍ಡಿಕೆ
Advertisement
ವಾಳಯಾರ್-ವಡಕ್ಕೆಂಚೇರಿ (Walayar-Vadakkencherry) ರಾಷ್ಟ್ರೀಯ ಹೆದ್ದಾರಿಯ ಅಂಜುಮೂರ್ತಿ ಮಂಗಲಂ ಬಸ್ ನಿಲ್ದಾಣದ ಬಳಿ ಈ ಅಪಘಾತ ನಡೆದಿದ್ದು, ಕಾರನ್ನು ಓವರ್ ಟೇಕ್ ಮಾಡಲು ಹೋಗಿ ಕೆಎಸ್‍ಆರ್‌ಟಿಸಿ ಬಸ್‍ಗೆ ಹಿಂಬದಿಯಿಂದ ಟೂರಿಸ್ಟ್ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ನಿಯಂತ್ರಣ ತಪ್ಪಿ ಟೂರಿಸ್ಟ್ ಬಸ್ ಪಲ್ಟಿಯಾಗಿದೆ.