CrimeDistrictsKarnatakaLatestMain PostTumakuru

ತುಮಕೂರಿನ ಭೀಕರ ರಸ್ತೆ ಅಪಘಾತಕ್ಕೆ ಪ್ರಧಾನಿ ಸಂತಾಪ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ನಡೆದ ಭೀಕರ ಅಪಘಾತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪವನ್ನು ಸೂಚಿಸಿದ್ದಾರೆ.

ತುಮಕೂರಿನಲ್ಲಿ ಮುಂಜಾನೆ ನಿಂತಿದ್ದ ಲಾರಿಗೆ ಗುದ್ದಿದ ಕ್ರೂಸರ್ ಗುದ್ದಿದ ಪರಿಣಾಮ 9 ಮಂದಿ ಮೃತಪಟ್ಟಿದ್ದರು. ಘಟನೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಮೃತರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಟ್ವೀಟ್‍ನಲ್ಲಿ ಏನಿದೆ?: ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕ. ಅಪಘಾತದಲ್ಲಿ ಜೀವ ಕಳೆದುಕೊಂಡವರಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥನೆ. ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಅಷ್ಟೇ ಅಲ್ಲದೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪವನ್ನು ಸೂಚಿಸಿದ್ದು, ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವಿಗೀಡಾಗಿ ಹಲವರು ಗಾಯಗೊಂಡಿರುವ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದತ್ತಪೀಠ ಮಾರ್ಗದಲ್ಲಿ ಬೃಹತ್ ಆಂಜನೇಯನ ಏಕಶಿಲಾ ಮೂರ್ತಿ ಸ್ಥಾಪನೆ!

ಗೃಹ ಸಚಿವ ಆರಗ ಜ್ಞಾನೇಂದ್ರ ಸಂತಾಪವನ್ನು ಸೂಚಿಸಿದ್ದು, ತುಮಕೂರಿನ ಶಿರಾ ರಸ್ತೆಯ ಬಾಲೇನಹಳ್ಳಿ ಗೇಟ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂಬತ್ತು ಮಂದಿ ಮೃತರಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಇದೊಂದು ಅತ್ಯಂತ ದುರಾದೃಷ್ಟಕರ ಘಟನೆ. ತುಮಕೂರು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಮಾತನಾಡಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ನಿರ್ದೇಶನ ನೀಡಲಾಗಿದೆ ಎಂದರು. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತಕ್ಕೆ 9 ಮಂದಿ ಬಲಿ

Live Tv

Leave a Reply

Your email address will not be published. Required fields are marked *

Back to top button