ಗಾಂಧಿನಗರ: ನಿರೀಕ್ಷೆಯಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದು, ಅವರ ತಾಯಿ ಹೀರಾಬೆನ್ ಅವರ ಮನೆಗೆ ಭೇಟಿ ನೀಡಿ, ಅವರೊಂದಿಗೆ ಭೋಜನ ಸೇವಿಸಿದ್ದಾರೆ.
ಇಂದು ಬೆಳಗ್ಗೆ ಸರ್ದಾರ್ ಸರೋವರ ಅಣೆಕಟ್ಟು ಹಾಗೂ ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಿದ್ದರು. ನಂತರ ಗುಜರಾತ್‍ನ ಗಾಂಧಿನಗರದಲ್ಲಿರುವ ತಾಯಿ ಹೀರಾಬೆನ್ ಅವರ ನಿವಾಸಕ್ಕೆ ತೆರಳಿ ಅವರೊಂದಿಗೆ ಮಧ್ಯಾಹ್ನದ ಊಟವನ್ನು ಮಾಡುವ ಮೂಲಕ ತಮ್ಮ 69ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.
Advertisement
Gujarat: Prime Minister Narendra Modi meets his mother Heeraben Modi at her residence, in Gandhinagar. Today is PM Modi's 69th birthday. pic.twitter.com/dVqy49fjUW
— ANI (@ANI) September 17, 2019
Advertisement
98 ವರ್ಷದ ಹೀರಾಬೆನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಊಟ ಮಾಡುತ್ತಿರುವ ಫೋಟೋ ಇದೀಗ ವೈರಲ್ ಆಗಿದ್ದು, ಅಲ್ಲದೆ ಊಟದ ನಂತರ ಪ್ರಧಾನಿ ಮೋದಿ ತಮ್ಮ ಅಕ್ಕ ಪಕ್ಕದ ಮನೆಯವರನ್ನು ಭೇಟಿಯಾಗಿದ್ದು, ಅವರೊಂದಿಗೆ ಸಹ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.
Advertisement
ಪ್ರಧಾನಿ ನರೇಂದ್ರ ಮೋದಿಯವರು ಹುಟ್ಟುಹಬ್ಬದ ಅಂಗವಾಗಿ ಇಂದು ಬೆಳಗ್ಗೆ ಸರ್ದಾರ್ ಸರೋವರಕ್ಕೆ ಭೇಟಿ ನೀಡಿದ್ದರು. ಸರ್ದಾರ್ ವಲ್ಲಭಾಯಿ ಪಟೇಲ್ ಪ್ರತಿಮೆಗೆ ನಮನ ಸಲ್ಲಿಸಿದ್ದರು. ಸೋಮವಾರ ರಾತ್ರಿಯೇ ಗುಜರಾತ್‍ಗೆ ಬಂದಿಳಿದಿದ್ದ ಪ್ರಧಾನಿ ಮೋದಿ, ಮಂಗಳವಾರ ಬೆಳಗ್ಗೆ ಗಾಂಧಿನಗರದಿಂದ ಕೆವಾಡಿಯಾಗೆ ತೆರಳಿದ್ದರು.
Advertisement
Gujarat: Prime Minister Narendra Modi meets his mother Heeraben Modi at her residence, in Gandhinagar. Today is PM Modi's 69th birthday. pic.twitter.com/vT8X46DfdK
— ANI (@ANI) September 17, 2019
ಸರ್ದಾರ್ ಸರೋವರ್ ಜಲಾಶಯದ ಅಣೆಕಟ್ಟೆಯ ಗರಿಷ್ಟ ಮಟ್ಟವಾದ 138.68ಮೀಟರ್ ಎತ್ತರದವರೆಗೆ ನೀರು ಸಂಗ್ರಹವಾದ ಹಿನ್ನೆಲೆಯಲ್ಲಿ ‘ನಮಾಮಿ ನರ್ಮದಾ ಮಹೋತ್ಸವ’ ಕಾರ್ಯಕ್ರಮ ಆಯೋಜನೆಗೊಂಡಿತ್ತು. ನರ್ಮದಾ ನದಿಯ ನೀರನ್ನು ಸ್ವಾಗತಿಸಲು ಅಣೆಕಟ್ಟಿನ ಬಳಿ ಸಿಎಂ ವಿಜಯ್ ರೂಪಾನಿ ಮತ್ತು ಮೋದಿ ಪೂಜೆ ಸಲ್ಲಿಸಿದರು.
Reached Kevadia a short while ago.
Have a look at the majestic ‘Statue of Unity’, India’s tribute to the great Sardar Patel. pic.twitter.com/B8ciNFr4p7
— Narendra Modi (@narendramodi) September 17, 2019
ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬಕ್ಕೆ ವಿವಿಧ ದೇಶಗಳ ಗಣ್ಯರು ಶುಭಾಶಯ ಕೋರಿದ್ದಾರೆ. ಅಲ್ಲದೆ, ದೇಶಾದ್ಯಂತ ಮೋದಿ ಅಭಿಮಾನಿಗಳು ವಿವಿಧ ಸಮಾಜಿಕ ಸೇವೆ ಹಾಗೂ ಸ್ವಚ್ಛತಾ ಕಾರ್ಯ ಸೇರಿದಂತೆ ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ಹಾಕಿಕೊಳ್ಳುವ ಮೂಲಕ ಮೋದಿ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ.