ಲಕ್ನೋ: ಮೂರನೇ ಬಾರಿ ಅಧಿಕಾರ ಹಿಡಿಯಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ವಾರಣಾಸಿ ಲೋಕಸಭಾ ಕ್ಷೇತ್ರದ (Varanasi Lok Sabha Constituency) ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮಧ್ಯಾಹ್ನ ವಾರಣಾಸಿ ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಎನ್‌ಡಿಎ ಮಿತ್ರ ಪಕ್ಷದ ನಾಯಕರು, ಬಿಜೆಪಿ ಮುಖ್ಯಮಂತ್ರಿಗಳು ಮೋದಿಗೆ ಸಾಥ್ ನೀಡಿದರು.
Advertisement
ನಾಮಪತ್ರ ಸಲ್ಲಿಕೆ ಮಾಡುವುದಕ್ಕೆ ಮೊದಲು ದಶಾಶ್ವಮೇಧ ಘಾಟ್‌ನಲ್ಲಿ (Dashashwamedh Ghat) ಗಂಗಾ ನದಿಗೆ (Ganga River) ಗಂಗಾ ಆರತಿ ಮಾಡಿದರು. ನಂತರ ವಾರಣಾಸಿ ಕಾಲಭೈರವ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ವಾರಣಾಸಿ ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ಮೂರನೇ ಬಾರಿ ನಾಮಪತ್ರ ಸಲ್ಲಿಕೆ ಮಾಡಿದರು.
Advertisement
Advertisement
ಯಾರೆಲ್ಲಾ ಸಾಥ್?
ಜೆಪಿ ನಡ್ಡಾ, ರಾಜನಾಥ್ ಸಿಂಗ್, ಅಮಿತ್ ಶಾ, ಯೋಗಿ ಆದಿತ್ಯನಾಥ್, ಏಕನಾಥ್ ಶಿಂಧೆ, ಕಾನ್ರಾಡ್ ಸಂಗ್ಮಾ, ಪ್ರಫುಲ್ ಪಟೇಲ್, ರಾಮದಾಸ್ ಅಠವಾಲೆ, ಹರ್ದೀಪ್ ಪುರಿ, ಚಂದ್ರಬಾಬು ನಾಯ್ಡು, ಪವನ್ ಕಲ್ಯಾಣ್, ಜಿತನ್ ರಾಮ್ ಮಾಂಝಿ, ಉಪೇಂದ್ರ ಕುಶ್ವಾಹ, ಸಂಜಯ್ ನಿಶಾದ್, ಅನುಪ್ರಿಯಾ ಪಟೇಲ್, ಓಂಪ್ರಕಾಶ್ ರಾಜಭರ್, ಜಯಂತ್ ಚೌಧರಿ, ಅಂಬುಮಣಿ ರಾಮದಾಸ್, ಜಿಕೆ ವಾಸನ್, ದೇವನಾಥನ್ ಯಾದವ್, ತುಶಾರ್ ವೆಲ್ಲಪ್ಪಲ್ಲಿ, ಅತುಲ್ ಬೋರಾ, ಪ್ರಮೋದ್ ಬೋರೋ, ಪಶುಪತಿ ಪಾರಸ್ ಮತ್ತು ಭೂಪೇಂದ್ರ ಚೌಧರಿ ಮೋದಿಗೆ ಸಾಥ್ ನೀಡಿದರು.
Advertisement
ಇಂದೇ ನಾಮಪತ್ರ ಸಲ್ಲಿಸಿದ್ದು ಯಾಕೆ?
ಇಂದು ಗಂಗಾ ಸಪ್ತಮಿ. ಹಿಂದೂಗಳ ಪಾಲಿಗೆ ಪವಿತ್ರವಾದ ದಿನವಾಗಿದೆ. ಗಂಗೆ ಜನಿಸಿದಳು ಎಂಬ ನಂಬಿಕೆಯಿದೆ. ಗಂಗಾ ಸಪ್ತಮಿಯಂದು ಶುಭ ಅಭಿಜಿನ್ ಲಗ್ನದಲ್ಲಿ ಮೋದಿ ನಾಮಪತ್ರ ಸಲ್ಲಿಸುವುದು ಶ್ರೇಯಸ್ಕರ ಎಂದು ಪಂಡಿತ್ ಗಣೇಶ್ವರ್ ಶಾಸ್ತ್ರಿ ಸೂಚಿಸಿದ ಹಿನ್ನೆಲೆಯಲ್ಲಿ ಇಂದು ಮೋದಿ ನಾಮಪತ್ರ ಸಲ್ಲಿಕೆ ಮಾಡಿದರು. ರಾಮಮಂದಿರ ಲೋಕಾರ್ಪಣೆಗೆ ಮಹೂರ್ತವನ್ನು ಪಂಡಿತ್ ಗಣೇಶ್ವರ್ ಶಾಸ್ತ್ರಿ ನೀಡಿದ್ದರು.