ನವದೆಹಲಿ: ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದು ವೈದ್ಯಕೀಯ ಕಾಲೇಜು ಸ್ಥಾಪಿಸುವ ಕೇಂದ್ರ ಸರ್ಕಾರದ ನೀತಿಯಿಂದಾಗಿ ಮುಂದಿನ 10 ವರ್ಷಗಳಲ್ಲಿ ದೇಶವು ದಾಖಲೆ ಸಂಖ್ಯೆಯ ವೈದ್ಯರನ್ನು ಹೊಂದಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.
ವೀಡಿಯೋ ಕಾನ್ಫರೆನ್ಸ್ ಮೂಲಕ ಗುಜರಾತ್‍ನ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ಜಿಲ್ಲೆಯಲ್ಲಿ ಕನಿಷ್ಟ ಒಂದು ವೈದ್ಯಕೀಯ ಕಾಲೇಜನ್ನು ನಿರ್ಮಿಸುವುದು ಹಾಗೂ 10 ವರ್ಷಗಳ ನಂತರ ದೇಶವು ದಾಖಲೆ ಸಂಖ್ಯೆಯಲ್ಲಿ ವೈದ್ಯರನ್ನು ನೇಮಕ ಮಾಡುವುದು ಕೇಂದ್ರದ ಗುರಿಯಾಗಿದೆ ಎಂದರು.
Advertisement
Advertisement
ಎರಡು ದಶಕಗಳ ಹಿಂದೆ ಗುಜರಾತ್ ಕೇವಲ ಒಂಬತ್ತು ವೈದ್ಯಕೀಯ ಕಾಲೇಜುಗಳನ್ನು ಹೊಂದಿತ್ತು. ಆದರೆ ಕಳೆದ 20 ವರ್ಷಗಳಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ಅನೇಕ ಬೆಳವಣಿಗೆಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ರಿವರ್ ರ‍್ಯಾಫ್ಟಿಂಗ್ ವೇಳೆ ನದಿಗೆ ಸಿಲುಕಿದ ಬೋಟ್: ಕೂದಲೆಳೆ ಅಂತರದಲ್ಲಿ 12 ಜೀವಗಳು ಪಾರು
Advertisement
ಈಗ ಗುಜರಾತ್ ರಾಜ್ಯವು ಒಂದು ಏಮ್ಸ್ ಮತ್ತು ಮೂರು ಡಜನ್ ವೈದ್ಯಕೀಯ ಕಾಲೇಜುಗಳನ್ನು ಹೊಂದಿದೆ. ಈ ಹಿಂದೆ ಗುಜರಾತ್‍ನ ವೈದ್ಯಕೀಯ ಕಾಲೇಜುಗಳಲ್ಲಿ ಕೇವಲ 1,000 ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದರು. ಈಗ ಸುಮಾರು 6,000 ವಿದ್ಯಾರ್ಥಿಗಳು ಈ ಕಾಲೇಜುಗಳಲ್ಲಿ ಪ್ರವೇಶ ಪಡೆದಿದ್ದಾರೆ. ರಾಜ್‍ಕೋಟ್‍ನ ಏಮ್ಸ್ 2021 ರಿಂದ 50 ವಿದ್ಯಾರ್ಥಿಗಳಿಗೆ ಪ್ರವೇಶವನ್ನು ಪ್ರಾರಂಭಿಸಿದೆ ಎಂದು ತಿಳಿಸಿದರು. ಇದನ್ನೂ ಓದಿ: ರೈತ ವಿರೋಧಿ ಕೃಷಿ ಕಾಯ್ದೆ ಹಿಂಪಡೆಯಲು ಆಗ್ರಹ