ಬೆಂಗಳೂರು: ಭಾರತೀಯ ವಿಜ್ಞಾನ ಮಂದಿರದಲ್ಲಿ (ಐಐಎಸ್‍ಸಿ) 280 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಮೆದುಳು ಅಧ್ಯಯನ ಕೇಂದ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆ ಮಾಡಿದರು. ಈ ಕೇಂದ್ರಕ್ಕೆ ಮೋದಿಯವರೇ 2015ರ ಫೆ.18ರಂದು ಶಂಕುಸ್ಥಾಪನೆ ನೆರವೇರಿಸಿದ್ದರು.
Advertisement
ಈ ಕೇಂದ್ರವು, ಕರ್ನಾಟಕ ಮತ್ತು ಭಾರತದ ಗ್ರಾಮೀಣ ಭಾಗಗಳಲ್ಲಿ ನಡೆಸುತ್ತಿರುವ ಪ್ರಮುಖ ಸಂಶೋಧನೆಗಳತ್ತ ಗಮನ ಕೇಂದ್ರೀಕರಿಸಲಿದ್ದು, ಡಿಮೆನ್ಶಿಯಾ ಕಾಯಿಲೆಗೆ ವೈದ್ಯಕೀಯ ಪರಿಹಾರ ಕಂಡುಹಿಡಿಯಲಿದೆ. ಇದಾದ ಬಳಿಕ ಪ್ರಧಾನಿ ಮೋದಿ ಅವರು ಐಐಎಸ್‍ಸಿ ಆವರಣದಲ್ಲಿ ತಲೆಯೆತ್ತಲಿರುವ 800ಕ್ಕೂ ಹೆಚ್ಚು ಹಾಸಿಗೆಗಳ ಸಾಮರ್ಥ್ಯದ ಬಾಗ್ಚಿ-ಪಾರ್ಥಸಾರಥಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಬೃಹತ್ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಆಸ್ಪತ್ರೆಯ ನಿರ್ಮಾಣಕ್ಕೆ, ಉದ್ಯಮಿಗಳಾದ ಸುಶ್ಮಿತಾ ಮತ್ತು ಸುಬ್ರತೋ ಬಾಗ್ಚಿ ಹಾಗೂ ರಾಧಾ ಮತ್ತು ಎನ್.ಎಸ್.ಪಾರ್ಥಸಾರಥಿಯವರು 425 ಕೋಟಿ ರೂ.ಗಳನ್ನು ದೇಣಿಗೆ ನೀಡಿದ್ದಾರೆ. ಇದನ್ನೂ ಓದಿ: ಇಷ್ಟು ಸಣ್ಣ ಇದ್ದೀರಿ ಯಾಕೆ..? – ಎಂಟಿಬಿ ಆರೋಗ್ಯದ ಗುಟ್ಟು ಕೇಳಿದ ಪ್ರಧಾನಿ ಮೋದಿ
Advertisement
ಪ್ರಧಾನಮಂತ್ರಿ @narendramodi ಅವರು ಇಂದು ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ 280 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಿರುವ ಮಿದುಳು ಸಂಶೋಧನಾ ಕೇಂದ್ರವನ್ನು ಲೋಕಾರ್ಪಣೆಗೊಳಿಸಿ, 425 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣ ವಾಗಲಿರುವ ಬಾಗ್ಚಿ- ಪಾರ್ಥಸಾರಥಿ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿದರು. pic.twitter.com/wyqOlXEymD
— Basavaraj S Bommai (@BSBommai) June 20, 2022
Advertisement
ಈ ಆಸ್ಪತ್ರೆ ಕಾರ್ಯಾರಂಭ ಮಾಡತೊಡಗಿದರೆ, ಐಐಎಸ್‍ಸಿಯಲ್ಲಿ ಅಂತರ್ಶಿಸ್ತೀಯ ತರಬೇತಿ, ಸಂಶೋಧನೆ, ಮತ್ತು ಕ್ಯಾನ್ಸರ್ ಹಾಗೂ ಹೃದ್ರೋಗಗಳಂಥ ಕಾಯಿಲೆಗಳಿಗೆ ಚಿಕಿತ್ಸೆ ಸಾಧ್ಯವಾಗಲಿದೆ. ಜೊತೆಗೆ, ಪ್ಲಾಸ್ಟಿಕ್ ಸರ್ಜರಿ, ರೋಬೋಟಿಕ್ ಸರ್ಜರಿ, ಅಂಗಾಂಗ ಕಸಿ ಕೂಡ ನಡೆಯಲಿದೆ. ಇದನ್ನೂ ಓದಿ: ರಾಮ್‍ದಾಸ್ ಹತ್ತಿರ ಕರೆದು ಬಾಗಿಸಿ ಬೆನ್ನಿಗೆ ಗುದ್ದಿದ ಮೋದಿ- ಪ್ರಧಾನಿಯಿಂದ ಶಾಸಕರಿಗೆ ಆಪ್ತ ಹಾರೈಕೆ