ನವದೆಹಲಿ: ಆಸ್ಟ್ರೇಲಿಯಾದಿಂದ ಇಂದು ಭಾರತಕ್ಕೆ ಮರಳಿದ 9-10ನೇ ಶತಮಾನದ ಹಿಂದಿನ 29 ಪುರಾತನ ವಸ್ತುಗಳನ್ನು ಪ್ರಧಾನಿ ನರೇಂದ್ರ ಮೋದಿ ಪರಿಶೀಲನೆ ನಡೆಸಿದರು.
ಐತಿಹಾಸಿಕ ಹಿನ್ನೆಲೆಯಿರುವ 29 ಪುರಾತನ ವಸ್ತುಗಳನ್ನು ಇಂದು ಆಸ್ಟ್ರೇಲಿಯಾ ಭಾರತಕ್ಕೆ ವಾಪಸ್ ಕಳುಹಿಸಿದೆ. ಈ ಪುರಾತನ ವಸ್ತುಗಳಲ್ಲಿ ಶಿವ ಹಾಗೂ ಅವನ ಶಿಷ್ಯರು, ಭಗವಾನ್ ವಿಷ್ಣು ಮತ್ತು ಅವನ ರೂಪಗಳ ಮೂರ್ತಿ ಜೈನ ಸಂಪ್ರದಾಯ, ಭಾವಚಿತ್ರಗಳು ಹಾಗೂ ಅಲಂಕಾರಿಕ ವಸ್ತುಗಳನ್ನು ಹೊಂದಿವೆ.
Advertisement
Advertisement
ಪುರಾತನ ವಸ್ತುಗಳು 9-10ನೇ ಶತಮಾನದ ಹಿಂದಿನಿದ್ದಾಗಿದೆ. ಆಸ್ಟ್ರೇಲಿಯಾದಿಂದ ಮರಳಿದ ಎಲ್ಲಾ ಪುರಾತನ ವಸ್ತುಗಳು ಮರಳು, ಅಮೃತಾಶಿಲೆ, ಕಂಚು, ಹಿತ್ತಾಳೆ, ಕಾಗದಗಳಿಂದ ರಚಿಸಲ್ಪಟ್ಟವಾಗಿದೆ. ಈ ಶಿಲ್ಪಗಳು ಮತ್ತು ವರ್ಣಚಿತ್ರಗಳು ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಉತ್ತರ ಪ್ರದೇಶ, ತಮಿಳುನಾಡು, ತೆಲಂಗಾಣ ಮತ್ತು ಪಶ್ಚಿಮ ಬಂಗಾಳವನ್ನು ಪ್ರತಿನಿಧಿಸುತ್ತವೆ.
Advertisement
Advertisement
ಭಾರತವು ಇತರೆ ರಾಷ್ಟ್ರಗಳಿಂದಲೂ ಹಲವಾರು ಪ್ರಾಚೀನ ವಸ್ತುಗಳನ್ನು ಮರಳಿ ತಂದಿದೆ. ಕಳೆದ ಸಪ್ಟೆಂಬರ್‍ನಲ್ಲಿ ಪ್ರಧಾನಿ ಮೋದಿ ಅವರು ಯುಎಸ್‍ನಿಂದ 157 ಕಲಾಕೃತಿಗಳು ಹಾಗೂ ಪ್ರಾಚೀನ ವಸ್ತುಗಳನ್ನು ಮರಳಿ ತಂದಿದ್ದರು. ಇದನ್ನೂ ಓದಿ: 13 ಗಂಟೆಯಲ್ಲಿ ಶ್ರೀಲಂಕಾದಿಂದ ತಮಿಳುನಾಡಿಗೆ ಸ್ವಿಮ್ಮಿಂಗ್ ಮಾಡಿದ 13ರ ಬಾಲಕಿ
ಪ್ರಧಾನಿ ಮೋದಿ ಮತ್ತು ಆಸ್ಟ್ರೇಲಿಯಾದ ಕೌಂಟರ್ ಸ್ಕಾಟ್ ಮಾರಿಸನ್ ಇಂದು ವರ್ಚುವಲ್ ಶೃಂಗಸಭೆಯನ್ನು ನಡೆಸಲಿದ್ದಾರೆ. ಇದನ್ನೂ ಓದಿ: ಯೋಗಿ ಪ್ರಮಾಣವಚನಕ್ಕೂ ಮುನ್ನವೇ ಹೊರಬಿತ್ತು ಸಚಿವ ಆಕಾಂಕ್ಷಿಗಳ ಪಟ್ಟಿ- ರೇಸ್‍ನಲ್ಲಿ ಯಾರಿದ್ದಾರೆ ನೋಡಿ