ನವದೆಹಲಿ: ಎಲ್ಲರೂ ನಮ್ಮ ಕುಟುಂಬದವರೊಂದಿಗೆ ದೀಪಾವಳಿ ಆಚರಿಸುತ್ತಿದ್ದೇವೆ. ಈ ಸಂದರ್ಭಲ್ಲಿ ನಮಗಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಶುಭಾಶಯ ಕೋರುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ವಾರಣಾಸಿಯ ಬಿಜೆಪಿ ಕಾರ್ಯಕರ್ತರೊಂದಿಗಿನ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಮಾತನಾಡಿದ ಅವರು, ಗಡಿಯಲ್ಲಿ ಹಾಗೂ ದೇಶದೊಳಗಿರುವ ಸೈನಿಕರು, ಭದ್ರತಾ ಸಿಬ್ಬಂದಿ, ಪೊಲೀಸರು ಹಾಗೂ ಎನ್‍ಡಿಆರ್‍ಎಫ್ ಕಾರ್ಯನಿರ್ವಹಿಸುತ್ತಿರುವವರಿಗೆ ಹಬ್ಬದ ಶುಭಾಶಯವನ್ನು ತಿಳಿಸಿದರು.
Advertisement
Prime Minister Modi: Today when we are all celebrating #Diwali with our family members, it is our duty to convey best wishes to those who work for us, at borders & within the country, whether it is security forces,police personnel or NDRF personnel. I bow down to all such people pic.twitter.com/VNgPGg9wqX
— ANI (@ANI) October 24, 2019
Advertisement
ಸದಾ ನಮ್ಮೊಂದಿಗಿರುವ ಕಾರ್ಯಕರ್ತರಿಗೆ ದೀಪಾವಳಿಯ ಸಂದರ್ಭದಲ್ಲಿ ಧನ್ಯವಾದ ಅರ್ಪಿಸುತ್ತೇನೆ. ಪರಿಶ್ರಮ, ತ್ಯಾಗ, ನಿಷ್ಟೆ, ಸೇವಾ ಭಾವಕ್ಕೆ ಆದರಪೂರ್ವಕವಾಗಿ ನಮನ ಸಲ್ಲಿಸುತ್ತೇನೆ ಎಂದು ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ.
Advertisement
ಈ ಬಾರಿ ಮಳೆಯಿಂದ ಜನ ಕಂಗೆಟ್ಟಿದ್ದಾರೆ. ದೀಪಾವಳಿಯ ಸಂದರ್ಭದಲ್ಲಿ ಈಗಲು ಕೂಡ ಮಳೆ ಬರುತ್ತಿದೆ. ಕಾಶಿಯಲ್ಲೂ ಇದೆ ಪರಿಸ್ಥಿತಿ ಇದೆ. ಎಲ್ಲರೂ ಸೇರಿ ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ. ನಾಗರಿಕರು, ಕಾರ್ಯಕರ್ತರು ಕೆಲಸ ಮಾಡಿದ್ದಾರೆ. ಇಂತಹ ಸಂದರ್ಭದಲ್ಲಿ ಜನರೊಂದಿಗೆ ನಾವೂ ಇರಬೇಕಿದೆ ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.
Advertisement
Interacting with BJP Karyakartas from Varanasi. Watch. https://t.co/QtyQxqXp1P
— Narendra Modi (@narendramodi) October 24, 2019
ಜನಸಂಘದಿಂದಲೂ ಸಂಘಟನೆಗಾಗಿ ಕೆಲಸ ಮಾಡುತ್ತಿದ್ದೀರಿ. ಚುನಾವಣೆಯ ಸಂದರ್ಭದಲ್ಲಿ ಹಗಲು, ರಾತ್ರಿ ಎನ್ನದೆ ದುಡಿದು ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದೀರಿ. ಅಲ್ಲದೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ವಾರಣಾಸಿಯಲ್ಲಿ ತುಂಬಾ ಕೆಲಸ ಮಾಡಿದ್ದೀರಿ. ಇದು ನನಗೆ ಸಂತೃಪ್ತಿ ತಂದಿದೆ. ನಿಮಗೆ ನನ್ನ ಹೃದಯ ಪೂರ್ವಕ ಧನ್ಯವಾದಗಳು ಎಂದು ತಿಳಿಸಿದ್ದಾರೆ.