ಬೆಂಗಳೂರು: ನವೆಂಬರ್ 11 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಕೆಂಪೇಗೌಡ ಇಂಟರ್ ನ್ಯಾಷನಲ್ ಏರ್‌ಪೋರ್ಟ್ ಟರ್ಮಿನಲ್-2 (Kempegowda International Airport) ಲೋಕಾರ್ಪಣೆ ಮಾಡಲಿದ್ದಾರೆ.
Advertisement
ವಿಶ್ವದ ಅತ್ಯಾಧುನಿಕ ಟೆಕ್ನಾಲಜಿಗಳೊಂದಿಗೆ ಇದೀಗ ವಿಮಾನಗಳ ಹಾರಾಟಕ್ಕೆ ಕೆಐಎಎಲ್-2 ಐಷಾರಾಮಿ ಏರ್‌ಪೋರ್ಟ್ ಸಿದ್ಧವಾಗಿದೆ. ಸ್ವರ್ಗವನ್ನೇ ನಾಚಿಸುವಂತಿದೆ ಬೆಂಗಳೂರು (Bengaluru) ವಿಮಾನ ನಿಲ್ದಾಣ. ಪ್ರಯಾಣಿಕರಿಗೆ ಅನುಕೂಲವಾಗುವಂತೆ ನೂತನವಾಗಿ ತಂತ್ರಜ್ಞಾನಗಳನ್ನು ಅಳವಡಿಸಲಾಗಿದೆ. ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಿ ಹೊಂದಿರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವರ್ಷಕ್ಕೆ ಲಕ್ಷಾಂತರ ಜನ ಪ್ರಯಾಣಿಸುತ್ತಾರೆ. ಹಾಗಾಗಿ ವಿಮಾನ ನಿಲ್ದಾಣ ತನ್ನ ಸಾಮರ್ಥ್ಯ ಹೆಚ್ಚಿಸಲು ಮುಂದಾಗಿ ಇದೀಗ ಟರ್ಮಿನಲ್-2 ಸಿದ್ಧಗೊಂಡಿದೆ. ಇದನ್ನೂ ಓದಿ: ಮೋದಿ ಆಡಳಿತದಲ್ಲಿ 2,132 ಉಗ್ರ ದಾಳಿ – 1,538 ಉಗ್ರರ ಹತ್ಯೆ
Advertisement
Advertisement
ಏನಿದೆ ವಿಶೇಷತೆ:
ಏರ್‌ಪೋರ್ಟ್ ಒಳಾಂಗಣವು ಸಂಪೂರ್ಣ ವುಡ್ ಡಿಸೈನ್, ಹಸಿರಿನೊಂದಿಗೆ ವಿನ್ಯಾಸಗೊಂಡಿದೆ. ಗ್ರೌಂಡ್ ಎಸಿ ಆಟೋ ಮೆಟಿಕ್ ಪಾಸ್‍ಪೋರ್ಟ್ ವೆರಿಫಿಕೇಷನ್, ಆಕರ್ಷಕ ಫ್ಲೋರಿಂಗ್ ಹಾಗೂ ಅತ್ಯಾಧುನಿಕ ಟೆಕ್ನಾಲಾಜಿಯನ್ನು ಹೊಂದಿದೆ. ವಿಮಾನ ಪ್ರಯಾಣಿಕರು ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ ಸಂದರ್ಭದಲ್ಲಿ ವ್ಯಕ್ತಿಯನ್ನು ಗುರುತಿಸಲು ಫೇಸ್ ರೆಕಗ್ನಿಷನ್, ಫಿಂಗರ್ ಪ್ರಿಂಟ್ ಸೆನ್ಸಾರ್ ಸೌಲಭ್ಯ. ಕೆಐಎಎಲ್ ನೂತನ ಟರ್ಮಿನಲ್‍ನಲ್ಲಿ ವಿಮಾನ ನಿಲ್ದಾಣದಲ್ಲಿನ ಸೌಲಭ್ಯಗಳ ಬಗ್ಗೆ ಪ್ಯಾಸೆಂಜರ್‌ಗಳಿಗೆ ಮಾಹಿತಿ ಪಡೆಯಲು ಇನ್ ಬಿಲ್ಟ್ ಸ್ಮಾರ್ಟ್ ಫೋನ್ ಅಪ್ಲಿಕೇಷನ್ ತಂತ್ರಜ್ಞಾನ ರೂಪಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಡ್ರೈನೇಜ್ ಬ್ಲಾಕ್ ದಂಧೆ – ಹಣಕ್ಕಾಗಿ ಮಿಡ್‌ನೈಟ್ ಆಪರೇಷನ್