ಲಕ್ನೋ: ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು (ಶನಿವಾರ) ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ (Varanasi) ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ (International Cricket Stadium) ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭ ಭಾರತದ ಮಾಜಿ ಕ್ರಿಕೆಟ್ ಆಟಗಾರರಾದ ಸಚಿನ್ ತೆಂಡೂಲ್ಕರ್ ಮತ್ತು ರವಿಶಾಸ್ತ್ರಿ, ಬಿಸಿಸಿಐ (BCCI) ಅಧ್ಯಕ್ಷ ರೋಜರ್ ಬಿನ್ನಿ, ಉಪಾಧ್ಯಕ್ಷ ರಾಜೀವ್ ಶುಕ್ಲಾ ಮತ್ತು ಕಾರ್ಯದರ್ಶಿ ಜಯ್ ಶಾ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಉತ್ತರ ಪ್ರದೇಶ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adithyanath) ಕೂಡಾ ಭಾಗವಹಿಸಿದ್ದರು. ಇದನ್ನೂ ಓದಿ: ಮೂರಲ್ಲ, 6 ಡಿಸಿಎಂ ಹುದ್ದೆಗಳು ಮಾಡಲಿ, ಡಿಕೆಶಿ ಸಿನಿಯರ್ DCM ಆಗಲಿ – ಬಸವರಾಜ್ ರಾಯರೆಡ್ಡಿ
ಸ್ಟೇಡಿಯಂಗಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು 121 ಕೋಟಿ ರೂ. ಹಣವನ್ನು ಖರ್ಚು ಮಾಡಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅದರ ನಿರ್ಮಾಣಕ್ಕೆ 330 ಕೋಟಿ ರೂ. ವೆಚ್ಚ ಮಾಡಲಿದೆ. ರಜತಲಾಬ್ ಪ್ರದೇಶದ ರಿಂಗ್ ರೋಡ್ ಬಳಿ ನಿರ್ಮಾಣವಾಗಲಿರುವ ಕ್ರೀಡಾಂಗಣವು ಡಿಸೆಂಬರ್ 2025ರ ವೇಳೆಗೆ ಸಿದ್ಧವಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ನಿಜ್ಜರ್‌ನಿಂದ ಕೆನಡಾದಲ್ಲಿ ಶಸ್ತ್ರಾಸ್ತ್ರ ತರಬೇತಿ, ಭಾರತದಲ್ಲಿ ದಾಳಿಗೆ ಧನ ಸಹಾಯ: ಗುಪ್ತಚರ ದಾಖಲೆ
ಕ್ರೀಡಾಂಗಣದ ಪ್ರೇಕ್ಷಕರ ಗ್ಯಾಲರಿಯು ವಾರಣಾಸಿಯ ಘಾಟ್‌ಗಳ ಮೆಟ್ಟಿಲುಗಳನ್ನು ಹೋಲುತ್ತದೆ. ಕಾನ್ಪುರ ಮತ್ತು ಲಕ್ನೋ ನಂತರ ಉತ್ತರ ಪ್ರದೇಶದ ಮೂರನೇ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಇದಾಗಿದೆ. ಇದನ್ನೂ ಓದಿ: ಬಿಜೆಪಿ ನಾಯಕನಿಂದ ನಿಂದನೆಗೊಳಗಾದ ಸಂಸದರನ್ನು ರಾಹುಲ್ ಗಾಂಧಿ ಭೇಟಿ
Web Stories