Wednesday, 26th February 2020

ಹುಬ್ಬಳ್ಳಿಯಿಂದಲೇ ಪ್ರಧಾನಿ ಮೋದಿ ಪ್ರಚಾರ ಆರಂಭ: ಆರ್.ಅಶೋಕ್

– ಫೆಬ್ರವರಿ 10ಕ್ಕೆ ಹುಬ್ಬಳ್ಳಿಯಲ್ಲಿ ನಡೆಯಲಿದೆ ಬೃಹತ್ ರ‍್ಯಾಲಿ

ಹುಬ್ಬಳ್ಳಿ: ಹುಬ್ಬಳ್ಳಿಯಿಂದಲೇ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಪ್ರಚಾರವನ್ನು ಆರಂಭಿಸಲಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿಯ ಕುಸುಗಲ್ ರಸ್ತೆಯ ಮೈದಾನದಲ್ಲಿ ಫೆಬ್ರವರಿ 10ರಂದು ಬೃಹತ್ ಸಮಾವೇಶ ನಡೆಯಲಿದೆ. ಧಾರವಾಡ, ಹಾವೇರಿ ಹಾಗೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾರ್ಯಕರ್ತರು ಸೇರಿದಂತೆ ರಾಜ್ಯ ನಾಯಕರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಆದರೆ ಚುನಾವಣಾ ಕಣಕ್ಕೆ ಇಳಿಯುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಲ್ಲ. ಈ ಕುರಿತು ಪಕ್ಷದ ವರಿಷ್ಠರೇ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಮಾಹಿತಿ ನೀಡಿದರು.

ಮೈತ್ರಿ ಸರ್ಕಾರ ವಿರುದ್ಧ ಕಿಡಿಕಾರಿದ ಆರ್.ಅಶೋಕ್ ಅವರು, ರಾಜ್ಯದಲ್ಲಿ ಅಧಿಕೃತ ಸಿಎಂ ಯಾರು? ಅನಧಿಕೃತ ಸಿಎಂ ಯಾರು? ನಾನು ಹೇಳಿರುವ ಬಜೆಟ್ ಮಂಡನೆಯಾಗುತ್ತದೆ. ನಾನು ಹೇಳಿದ ಸಂಗತಿಗಳು ಬಜೆಟ್‍ನಲ್ಲಿ ಇವೆ ಅಂತಾ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಕುಟುಕಿದರು.

ಮೈತ್ರಿ ಸರ್ಕಾರದ ಬಜೆಟ್ ಮಂಡನೆ ಆಗುತ್ತದೆಯೋ ಅಥವಾ ಕಾಂಗ್ರೆಸ್ ಬಜೆಟ್ ಮಂಡನೆಯಾಗುತ್ತದೆಯೋ ಎಂದ ಅವರು, ನಾವು ಯಾವುದೇ ಕಾರಣಕ್ಕೂ ಇನ್ನು ಮುಂದೆ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಯಾವ ಸಮಯದಲ್ಲಿ ಬೇಕಾದ್ರೂ ಬಿಜೆಪಿ ಅಧಿಕಾರಕ್ಕೆ ಬರಬಹುದು ಎಂದು ಮೈತ್ರಿ ಸರ್ಕಾರಕ್ಕೆ ಆಪರೇಷನ್ ಕಮಲ ಆತಂಕ ಮೂಡಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

Leave a Reply

Your email address will not be published. Required fields are marked *