ನವದೆಹಲಿ: ಬಿಜೆಪಿ ನೇತೃತ್ವದ ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಪ್ರಧಾನಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದಾರೆ.
Advertisement
ಒಡಿಸ್ಸಾ ಮೂಲದ ದ್ರೌಪದಿ ಮುರ್ಮು ನಾಳೆ ರಾಷ್ಟ್ರಪತಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಹಾಗಾಗಿ ಇಂದು ಮೋದಿ ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದ್ದಾರೆ. ಆ ಬಳಿಕ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಅಮಿತ್ ಶಾ, ಶಾಲು ಹೊದಿಸಿ ಹೂಗುಚ್ಚ ನೀಡಿ ದ್ರೌಪದಿ ಮುರ್ಮುರನ್ನು ಅಭಿನಂದಿಸಿದರು. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಯ BJP ಅಭ್ಯರ್ಥಿ ದ್ರೌಪದಿ ಮುರ್ಮುಗೆ ʼZ’ ಭದ್ರತೆ
Advertisement
ದ್ರೌಪದಿ ಮುರ್ಮು ಅವರು ಒಡಿಸ್ಸಾದ ಮಾಯರ್ಭಾಂಜ್ ಜಿಲ್ಲೆಯವರಾಗಿದ್ದು, ಬುಡಕಟ್ಟು ಜನಾಂಗ ಮೂಲದ ಮಹಿಳೆ. ಈ ಹಿಂದೆ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು. 2015-21ರ ಅವಧಿಯಲ್ಲಿ ಜಾರ್ಖಂಡ್‍ನ ರಾಜ್ಯಪಾಲರಾಗಿದ್ದರು. ಇದೀಗ 16ನೇ ರಾಷ್ಟ್ರಪತಿ ಚುನಾವಣೆಯ ಎನ್‍ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
Advertisement
#WATCH | Delhi: Union Home Minister Amit Shah meets NDA's Presidential candidate Droupadi Murmu, today pic.twitter.com/bQTBd64aBR
— ANI (@ANI) June 23, 2022
Advertisement
ವಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಮತ್ತು ದ್ರೌಪದಿ ಮುರ್ಮು ನಡುವೆ ರಾಷ್ಟ್ರಪತಿ ಹುದ್ದೆಗಾಗಿ ಪೈಪೋಟಿ ನಡೆಯಲಿದೆ. ಈಗಾಗಲೇ ಬಹುತೇಕ ದ್ರೌಪದಿ ಮುರ್ಮುಗೆ ಅರ್ಧಕ್ಕಿಂತಲೂ ಹೆಚ್ಚಿನ ಮತ ಇದ್ದು, ಇನ್ನೂ ವಿಪಕ್ಷಗಳ ಬೆಂಬಲ ಸಿಕ್ಕರೆ ಸುಲಭವಾಗಿ ಜಯಗಳಿಸಬಹುದಾಗಿದೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಇದನ್ನೂ ಓದಿ: ಕಾಂಗ್ರೆಸ್ ಪಕ್ಷದಲ್ಲಿ ಇರುವ ನಾಯಕರು ನಕಲಿ ಗಾಂಧಿ ಕುಟುಂಬದ ರಬ್ಬರ್ ಸ್ಟಾಂಪ್: ಬಿಜೆಪಿ