LatestMain PostNational

ಕೇಂದ್ರ ಸಚಿವರ ಮನೆಯಲ್ಲಿ ಗಣೇಶನಿಗೆ ಆರತಿ ಮಾಡಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಗಣೇಶನಿಗೆ ಆರತಿ ಮಾಡಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ನವದೆಹಲಿಯಲ್ಲಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಮನೆಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರು ಅಲ್ಲಿ ಗಣೇಶ ಚತುರ್ಥಿಯನ್ನು ಆಚರಿಸಿದ್ದರು. ಈ ವೇಳೆ ಗಣಪತಿಗೆ ಆರತಿಯನ್ನು ಮಾಡಿದ್ದಾರೆ. ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಸಂಸ್ಕೃತದ ಶ್ಲೋಕವನ್ನು ಟ್ವೀಟ್ ಮಾಡಿದ್ದ ಅವರು, ಗಣೇಶನ ಆಶೀರ್ವಾದ ಎಲ್ಲರ ಮೇಲಿರಲಿ ಎಂದು ತಿಳಿಸಿದ್ದರು. ಇದನ್ನೂ ಓದಿ: ಮುರುಘಾ ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿ ಗುರುವಾರ ವಿಚಾರಣೆ – ಮಠಕ್ಕೆ ಪೊಲೀಸ್ ಭದ್ರತೆ

ಅಷ್ಟೇ ಅಲ್ಲದೇ ರಾಷ್ಟ್ರಪತಿ ದ್ರೌಪದಿ ಮುರ್ಮು, ಅಮಿತ್ ಶಾ ಸೇರಿ ಅನೇಕ ನಾಯಕರು ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಶುಭ ಕೋರಿದ್ದಾರೆ. ಗಣೇಶ ಚತುರ್ಥಿಯಂದು ಸಮಸ್ತ ನಾಡಿನ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಮಂಗಳಮೂರ್ತಿ ಗಣಪತಿಯು ಜ್ಞಾನ, ಸಾಧನೆ ಮತ್ತು ಅದೃಷ್ಟದ ಸಂಕೇತವಾಗಿದೆ. ಶ್ರೀ ಗಣೇಶನ ಆಶೀರ್ವಾದದಿಂದ ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿ ಹರಡಲಿ ರಾಷ್ಟ್ರಪತಿ ಮುರ್ಮು ಟ್ವೀಟ್ ಮಾಡಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಎಲ್ಲಾ ನಾಡಿನ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು. ಗಣಪತಿ ಬಪ್ಪಾ ಮೋರಿಯಾ ಎಂದು ಅವರು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಕುರಬಗೇರಿಯ ಬನಶಂಕರಿ ದೇವಸ್ಥಾನಕ್ಕೆ ಬೆಳ್ಳಿ ಗಣಪತಿ ಹಸ್ತಾಂತರ

Live Tv

Leave a Reply

Your email address will not be published. Required fields are marked *

Back to top button