ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದ ಅಜ್ಮೀರ್ ದರ್ಗಾಕ್ಕೆ ಅರ್ಪಿಸಲೆಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಅವರ ಮೂಲಕ ಚಾದರವನ್ನು ಕಳುಹಿಸಿಕೊಟ್ಟಿದ್ದಾರೆ. ಇದನ್ನು ಪ್ರಧಾನಿ ಮೋದಿ ತಮ್ಮ ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದಾರೆ.
ಟ್ವೀಟ್‍ನಲ್ಲಿ ಏನಿದೆ?: ಖ್ವಾಜಾ ಮೊಯಿನುದ್ದೀನ್ ಚಿಸ್ತಿಯ ಉರ್ಸ್‍ನಲ್ಲಿ ಅಜ್ಮೀರ್ ಷರೀಫ್ ದರ್ಗಾಕ್ಕೆ ಚಾದರ್‍ವನ್ನು ಅರ್ಪಿಸಲಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಪ್ರಧಾನಿ ಹಾಗೂ ಸಚಿವರು ಚಾದರ್ ಹಿಡಿದಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.
Advertisement
Presented the Chadar which shall be offered at the Ajmer Sharif Dargah on the Urs of Khwaja Moinuddin Chishti. pic.twitter.com/SJhObXNhRA
— Narendra Modi (@narendramodi) February 2, 2022
Advertisement
ಅಜ್ಮೀರ್ ಷರೀಫ್ ದರ್ಗಾವು ರಾಜಸ್ಥಾನದ ಅಜ್ಮೀರ್‍ನಲ್ಲಿರುವ ಪವಿತ್ರ ಸೂಫಿ ದರ್ಗಾವಾಗಿದೆ. ಅಲ್ಲಿ ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಅವರ 810ನೇ ಉರ್ಸ್‍ನಲ್ಲಿ ಚಾದರವನ್ನು ಅರ್ಪಿಸಲಾಗುತ್ತದೆ. ಪ್ರತಿ ವರ್ಷ ಜಾತಿ, ಧರ್ಮ ಮತ್ತು ಧರ್ಮವನ್ನು ಲೆಕ್ಕಿಸದೇ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಾರೆ. ಇದನ್ನೂ ಓದಿ: ಚೀನಾವನ್ನು ಪ್ರತಿನಿಧಿಸಲು ಬಂದಿದ್ದಾರೆಯೇ: ರಾಹುಲ್ ವಿರುದ್ಧ ಜೋಶಿ ಕಿಡಿ
Advertisement
Advertisement
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಮಂಗಳವಾರ ದರ್ಗಾಕ್ಕೆ ಚಾದರವನ್ನು ಕಳಿಸಿಕೊಟ್ಟಿದ್ದಾರೆ. ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಉರುಸ್‍ಗಾಗಿ ರಾಹುಲ್ ಗಾಂಧಿಯವರು ಚಾದರ್‍ವನ್ನು ಕೊಟ್ಟಿದ್ದನ್ನು ಕಾಂಗ್ರೆಸ್‍ನ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಇಮ್ರಾನ್ ಪ್ರತಾಪ್‍ಗಢಿ ದೃಢಪಡಿಸಿದ್ದಾರೆ. ಇದನ್ನೂ ಓದಿ: ಭಾರತವನ್ನು ಸಾಮ್ರಾಜ್ಯವಾಗಿ ಆಳಲು ಸಾಧ್ಯವಿಲ್ಲ: ರಾಹುಲ್ ಗಾಂಧಿ